Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿಇಂದು ಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ

---Advertisement---

ಚಿತ್ರದುರ್ಗ.ಜುಲೈ.25: ಚಿತ್ರದುರ್ಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಪರಿಶೀಲನೆ ಹಾಗೂ ಬೆಂಗಳೂರು ವಿಭಾಗ ಮಟ್ಟದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನೆರವೇರಲಿದೆ.

ಈ ಮಹತ್ವದ ಸಭೆಯಲ್ಲಿ ಜಿಲ್ಲೆಯಾದ್ಯಂತ ಎದುರಾಗಿರುವ ಕುಡಿಯುವ ನೀರಿನ ಪೂರೈಕೆಯ ಸವಾಲುಗಳು, ಬರ ಪರಿಸ್ಥಿತಿ ಎದುರಿಸಲು ಕೈಗೊಳ್ಳಬೇಕಾದ ತುರ್ತು ಕ್ರಮಗಳು ಹಾಗೂ ಸಂಕಷ್ಟದಲ್ಲಿರುವ ರೈತರ ಹಿತರಕ್ಷಣೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಗುತ್ತದೆ. ಇದರ ಜೊತೆಗೆ ಬೆಂಗಳೂರು ವಿಭಾಗ ವ್ಯಾಪ್ತಿಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ಸಹ ನಡೆಸಲಾಗುತ್ತದೆ.

ಸಭೆಯಲ್ಲಿ ಪ್ರದೇಶದ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸುವಂತೆ ಹಾಗೂ ಕೈಗೆತ್ತಿಕೊಂಡಿರುವ ಕಾಮಗಾರಿಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now