Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ತೀವ್ರ ಕುಡಿಯುವ ನೀರು, ಮೇವಿನ ಅಭಾವ: ‘ರಾಷ್ಟ್ರೀಯ ವಿಪತ್ತು’ ಘೋಷಣೆಗೆ ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 25 : ಬರ ಪರಿಸ್ಥಿತಿ ಯಿಂದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಇದೆ. ರಾಷ್ತ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.

ನಗರದ ಪ್ರಸಿದ್ಧ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸೂಪರ್ ಎಲ್ ನಿನೋ ಪರಿಣಾಮದಿಂದ ರಾಜ್ಯದ ಬಹಳಷ್ಟು ಜಲಾಶಯ ಗಳು ಡೆಡ್ ಸ್ಟೋರೇಜ್ ತಲುಪಿವೆ. ಬೆಂಗಳೂರು ವಿಭಾಗದ ಜಿಲ್ಲೆಗಳಲ್ಲಿ ಶೇ. -37 (ಋಣಾತ್ಮಕ) ಮಳೆಯಾಗಿದೆ. ಕಳೆದ 75 ವರ್ಷಗಳಲ್ಲಿ 25 ವರ್ಷ ಎಲ್ ನಿನೋ ಪರಿಣಾಮವನ್ನು ದೇಶ ಎದುರುಸಿದೆ.

ಬೆಂಗಳೂರು ವಿಭಾಗದ ಜಿಲ್ಲೆಗಳಲ್ಲಿ ಒಟ್ಟು 13.73 ಲಕ್ಷ ಹೆಕ್ಟೇರ್ ಬಿತ್ತನೆ ಆಗಬೇಕಿತ್ತು. ಆದರೆ ಮಳೆಯಾಗದ ಕಾರಣ ಕೇವಲ 1.74 ಲಕ್ಷ ಹೆ. ನಷ್ಟು ಮಾತ್ರ ಬಿತ್ತನೆಯಾಗಿರುವುದು, ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿಯನ್ನು ಬಿಂಬಿಸುತ್ತದೆ.

ರಾಜ್ಯದ ಕೆರೆಗಳಲ್ಲಿ ನೀರಿಲ್ಲ, ಕೆರೆಗಳಲ್ಲೂ ನೀರಿಲ್ಲ, ಅಂತರ್ಜಲ ಕುಸಿದಿದೆ.
ರಾಜ್ಯದಲ್ಲಿ ಬಹಳಷ್ಟು ಗ್ರಾಮ, ಪಟ್ಟಣಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಪರಿಸ್ಥಿತಿ ಬಂದಿದೆ.

ಈಗಾಗಲೆ ಮುಖ್ಯಮಂತ್ರಿ ಗಳು ಕುಡಿಯುವ ನೀರು ಸರಬರಾಜು ಕಾರ್ಯಕ್ಕಾಗಿಯೇ ಪ್ರತಿ ಜಿಲ್ಲೆಗೆ 5 ಕೋಟಿ ರೂ. ಅನುದಾನ ಕೊಡಲಾಗಿದೆ. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 01 ಕೋಟಿ ರೂ. ನೀಡಲು ಕ್ರಮ ಆಗಿದೆ. ಆಯಾ ಶಾಸಕರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಿ, ಪರಿಸ್ಥಿತಿಯ ಪರಾಮರ್ಶೆ ನಡೆಸಿ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಕುಡಿಯುವ ನೀರು, ಮೇವು, ಉದ್ಯೋಗ ನೀಡಲು ಯಾವುದೇ ಹಣದ ಕೊರತೆ ಇಲ್ಲ :

ರಾಜ್ಯದಲ್ಲಿನ ಜಾನುವಾರು ಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಪಶುಸಂಗೋಪನೆ ಇಲಾಖೆ ಮೇವು ಸಂಗ್ರಹ ಹಾಗೂ ಪೂರೈಕೆ ಬಗ್ಗೆ ನಿಗಾ ವಹಿಸಬೇಕು. ನೀರು ಲಭ್ಯ ಇರುವೆಡೆ ಮೇವು ಬೆಳೆಯಲು ಮೆವಿನ ಬೀಜದ ಕಿಟ್ ವಿತರಿಸಬೇಕು ಎಂದು ಸೂಚನೆ ನೀಡಿದರು.
ರಾಜ್ಯದ ಬಾಗಲಕೋಟೆ, ಬಿಜಾಪುರ, ಕೊಪ್ಪಳ ಮುಂತಾದ ಜಿಲ್ಲೆಗಳಲ್ಲಿ ಜನ ಕೆಲಸ ಅರಸಿಕೊಂಡು ಗುಳೇ ಹೋಗುತ್ತಿರುವ ಬಗ್ಗೆ ಕೇಳಿ ಬಂದಿದೆ. ಇದನ್ನು ತಡೆಗಟ್ಟಿ, ಕೂಲಿ ಕಾರ್ಮಿಕರಿಗೆ ವಿ.ಬಿ.ಜಿ.ರಾಮ್ ಜಿ ಯೋಜನೆಯಡಿ ಸ್ಥಳೀಯವಾಗಿಯೇ ಕೆಲಸ ನೀಡಬೇಕು. ಇದಕ್ಕೆ ನಾವೇ ಹಣ ಕೊಡುತ್ತೇವೆ. ಕುಡಿಯುವ ನೀರು, ಮೇವು, ಉದ್ಯೋಗ ನೀಡಲು ಯಾವುದೇ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬರ ಪೀಡಿತ ಎಂದು ಘೋಷಿಸುವ ನಿಟ್ಟಿನಲ್ಲಿ ರಾಜ್ಯದ ಗಂಭೀರ ಪರಿಸ್ಥಿತಿ ಯ ವಿವರಗಳೊಂದಿಗೆ ಈಗಾಗಲೇ ಮುಖ್ಯಮಂತ್ರಿಗಳು ಪ್ರಧಾನಮಂತ್ರಿ ಗಳಿಗೆ ಪತ್ರ ಬರೆದಿದ್ದಾರೆ. ನಾವು ಕೂಡ ಕೇಂದ್ರ ಗೃಹ ಹಾಗೂ ಕೃಷಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ.

ಬರ ಪರಿಸ್ಥಿತಿ ಘೋಷಣೆಗೆ ಕೇಂದಗರ ಸರ್ಕಾರ 10 ಮಾನದಂಡಗಳನ್ನು ನಿಗದಿಪಡಿಸಿದೆ. ಆದರೆ ರಾಜ್ಯದ ಈಗಿನ ಗಂಭೀರ ಬರ ಪರಿಸ್ಥಿತಿಯನ್ನು ಅವಲೋಕಿಸಿ, ಮಾನದಂಡಗಳನ್ನು ಸಡಿಲಿಸಿ, ವಿನಾಯಿತಿ ನೀಡಿ, ಬರ ಪರಿಹಾರಕ್ಕಾಗಿ ಅನುದಾನ ನೀಡುವಂತೆ ಹಾಗೂ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲು ಮನವಿ ಮಾಡಲಾಗಿದೆ. ಆದರೆ ಇದಕ್ಕೆ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now