ಸುದ್ದಿಒನ್, ಚಿತ್ರದುರ್ಗ, ಜುಲೈ. 26 : ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು, ಮನರೇಗಾ ಯೋಜನೆಯನ್ನು ವಿ.ಬಿ.ಜಿ. ರಾಮ್ ಜಿ ಯೋಜನೆಯಾಗಿ ಪರಿಷ್ಕರಿಸಿದ್ದು, ರಾಜ್ಯ ಕೂಡ ಹೆಚ್ಚಿನಮೊತ್ತದ ಅನುದಾನ ನೀಡಬೇಕಿದೆ.
ಬಡವರಿಗೆ ಕೂಲಿ ಕೆಲಸಕ್ಕಾಗಿ ನೀಡಲು ಯಾವುದೇ ಹಣದ ಕೊರತೆಯಿಲ್ಲ. ಗ್ರಾಮಗಳಲ್ಲಿ ಈ ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಹೆಚ್ಚು ಹೆಚ್ಚು ಕೈಗೊಂಡು, ಸ್ಥಳೀಯ ವಾಗಿಯೇ ಹೆಚ್ಚಿನ ಕೂಲಿ ಕೆಲಸ ನೀಡಬೇಕು. ಈ ಮೂಲಕ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಾಸಕರುಗಳು ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು. ಆರ್.ಡಿ.ಪಿ.ಆರ್ ಇಲಾಖೆಯು ಈ ಕುರಿತು ಕರಪತ್ರಗಳನ್ನು ಗ್ರಾಮಗಳಲ್ಲಿ ವಿತರಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮುಖ್ಯಮಂತ್ರಿ ಗಳು ಸೂಚನೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









