ಚಿತ್ರದುರ್ಗ. ಜು.25: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ರೂ.5,300 ಕೋಟಿ ಹಣ ಬಿಡುಗಡೆಯಾಗುತ್ತಿಲ್ಲ. ಇದರಿಂದ ಯೋಜನೆ ಕುಂಠಿತವಾಗಿದೆ. ಇದರ ಬದಲಾಗಿ ಕೆ.ಎಂ.ಇ.ಆರ್.ಸಿ ಅನುದಾನವನ್ನೇ ಯೋಜನೆಗೆ ಬಳಸಲು ಅನುಮತಿ ನೀಡಬೇಕು ಎಂದು ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಆಗ್ರಹಿಸಿದರು.
ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಮಧ್ಯ ಕರ್ನಾಟಕ ಹಾಗೂ ಬಯಲುಸೀಮೆ ಭಾಗದ ಜನರಿಗೆ ಕುಡಿಯುವ ನೀರು ಹಾಗೂ ಕೃಷಿ ನೀರಾವರಿ ಕಲ್ಪಿಸುವಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅತ್ಯಂತ ನಿರ್ಣಾಯಕವಾಗಿದೆ. ಈ ಯೋಜನೆಯ ಕಾಮಗಾರಿಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲು ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳಬೇಕಿದೆ. ಕೆ.ಎಂ.ಇ.ಆರ್.ಸಿ ನಿಧಿಯಲ್ಲಿ ಲಭ್ಯವಿರುವ ಅನುದಾನವನ್ನು ಈ ಬೃಹತ್ ಯೋಜನೆಗೆ ಸದ್ಬಳಕೆ ಮಾಡಿಕೊಂಡರೆ, ಕಾಮಗಾರಿಗೆ ಹೆಚ್ಚಿನ ವೇಗ ಸಿಗಲಿದೆ ಎಂದು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟರು.
ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಚರ್ಚಿಸಿ ಕೂಡಲೇ ಕೆ.ಎಂ.ಇ.ಆರ್.ಸಿ ಅನುದಾನ ಬಳಕೆ ನಿಯಮಗಳಲ್ಲಿ ಮಾರ್ಪಾಡು ತರಬೇಕು ಎಂದರು.
ಈಗಾಗಲೇ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ನಗರಕ್ಕೆ ಹತ್ತಿರುವ ಗೋನೂರು ಅಕ್ವಡೆಕ್ಟ್ ಅವರೆ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಈ ಅಕ್ವಾ ಡೆಕ್ಟ್ ಕಾಮಗಾರಿ ಮುಂದುವರೆಯಲು ರೂ.360 ಕೋಟಿ ಅನುದಾನ ಬೇಕಾಗಿದೆ. ಯೋಜನೆ ಪೂರ್ಣಗೊಂಡರೆ ಮೊಳಕಾಲ್ಮೂರು ತಾಲ್ಲೂಕಿನ ಬಹುತೇಕ ಕೆರೆಗಳಿಗೆ ನೀರು ಲಭಿಸಲಿದೆ ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. ಈ ಮಾತಿಗೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಯವರು ಧ್ವನಿಗೂಡಿಸಿದರು.
ಗೋನೂರು ಅಕ್ವಾಡೆಕ್ಟ್ ಕಾಮಗಾರಿಗೆ ಬೇಕಾಗಿರುವ ಅನುದಾನ ವಿವರಗಳೊಂದಿಗೆ ಪ್ರತ್ಯೇಕವಾಗಿ ಬಂದು ಭೇಟಿ ಮಾಡಿ ಚರ್ಚಿಸುವಂತೆ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











