ಸುದ್ದಿಒನ್, ಚಿತ್ರದುರ್ಗ, ಜು. 25 :- ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕಿಂದು ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ ಇನ್ನಿತರೆ ಸಚಿವರುಗಳು, ಸಂಸದರು, ಶಾಸಕರು, ಸರ್ಕಾರದ ಮುಖ್ಯಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳು ಭೇಟಿ ನೀಡಿ, ಕರ್ತೃಗದ್ದುಗೆಯ ದರ್ಶನ ಪಡೆದು ಶ್ರೀಮಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಶ್ರೀ ಬಸವಪ್ರಭು ಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್ ಅವರಿಂದ ಶ್ರೀಮಠದ ಗೌರವವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಮಾಜಗಳ ಮಠಾಧೀಶರು, ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎನ್. ತಿಪ್ಪೇಸ್ವಾಮಿ, ಮಹಡಿ ಶಿವಮೂರ್ತಿ ಮೊದಲಾದರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










