Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಹಿರಿಯೂರಿನಲ್ಲಿ ಡಿ.ಸುಧಾಕರ್ ನುಡಿನಮನ : ಸಿದ್ಧತೆ ಪರಿಶೀಲಿಸಿದ ಮಾಜಿ ಸಚಿವ ಎಚ್.ಆಂಜನೇಯ

---Advertisement---

ಚಿತ್ರದುರ್ಗ, ಜು.25: ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ.ಸುಧಾಕರ್ ಅವರ ನುಡಿನಮನ ಕಾರ್ಯಕ್ರಮ ಜು.26ರ ಭಾನುವಾರ ಆಯೋಜಿಸಿದ್ದು, ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಗಲಿದ ನಾಯಕನ ಸೇವೆ ಸ್ಮರಿಸಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

ಹಿರಿಯೂರಿನ ನೆಹರು ಮೈದಾನದಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಡಿ.ಸುಧಾಕರ್ ಎಲ್ಲ ಜಾತಿ-ಧರ್ಮದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚಳ್ಳಕೆರೆ-ಹಿರಿಯೂರು ಕ್ಷೇತ್ರದಲ್ಲಿ ನಿರಂತರ ಗೆಲುವು ಸಾಧಿಸಿ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಸೇವೆ ಸ್ಮರಣೀಯ ಎಂದರು.

ಎರಡು ಬಾರಿ ಮಂತ್ರಿ, ಒಮ್ಮೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವರು ಜಿಲ್ಲೆಯ ಸಮಗ್ರ ಪ್ರಗತಿಗೆ ಅವಿರತವಾಗಿ ಶ್ರಮಿಸುತ್ತಿದ್ದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ‌ ಮಹಿಳೆ, ರೈತರು, ಅಶಕ್ತ ವರ್ಗದ ಜನರ ನೆರವಿಗೆ ಧಾವಿಸುತ್ತಿದ್ದರು. ಆದರೆ, ಮಂಡಿ ನೋವು
ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿ ಶ್ವಾಶಕೋಶದ ತೊಂದೆಯಿಂದ ನಮ್ಮನ್ನು ಅಗಲಿದ್ದು ಅತ್ಯಂತ ನೋವು. ಈಗ ಅವರ ಸೇವೆ ಸ್ಮರಿಸುವ ಕಾರ್ಯದೊಂದಿಗೆ ಅವರಿಗೆ ನುಡಿನಮನ ಸಲ್ಲಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಆಗಿದೆ ಎಂದು ತಿಳಿಸಿದರು.

ಆದ್ದರಿಂದ ಜು.26ರ ಭಾನುವಾರ ಹಿರಿಯೂರಿನ ನೆಹರು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ
ಆಯೋಜಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ
ಸಕಲ ಸಿದ್ಧತೆ ನಡೆಸಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿ ಅನೇಕ ಸಚಿವರು, ಶಾಸಕರು, ಸಂಸದರು, ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಹಿನ್ನೆಲೆಯಲ್ಲಿ ನಾಡಿನ ಅಪರೂಪದ ರಾಜಕಾರಣಿ ಆಗಿದ್ದ ಡಿ.ಸುಧಾಕರ್ ನುಡಿನಮನ
ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಅವರ ಅಭಿಮಾನಿಗಳು, ಕಾರ್ಯಕರ್ತರು, ಬೆಂಬಲಿಗರು
ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now