ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಜುಲೈ. 25 : ತಾಲೂಕಿನ ರೈತರಿಗೆ ಉತ್ತಮ ಮಳೆಯಾಗಿ ಸಮೃದ್ಧ ಬೆಳೆ ಬರಲಿ, ಜನರ ಬದುಕಿನಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂಬ ಸಂಕಲ್ಪದೊಂದಿಗೆ ಜುಲೈ 27ರಿಂದ 29ರವರೆಗೆ ನಗರದ ಸದ್ಗುರು ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುಪೂರ್ಣಿಮಾ ಜಾತ್ರಾ ಮಹೋತ್ಸವ ಮತ್ರು ಸಾಮೂಹಿಕ ಸತ್ಯನಾರಾಯಣ ಪೂಜೆ ಪ್ರಯಕ್ತ ಧಾರ್ಮಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶ್ರೀ ವೆಂಕಟಸಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಸಿ. ಸಂಜೀವಮೂರ್ತಿ ಹೇಳಿದರು.

ನಗರದ ಸಾಯಿಬಾಬಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯ ಮಾತನಾಡಿ. ಜುಲೈ 27ರಂದು ನಗರದ ವಾಲ್ಮೀಕಿ ವೃತ್ತದಿಂದ ನಗರದ ವಿವಿಧ ವಾರ್ಡ್ಗಳ ಪ್ರಮುಖ ಬೀದಿಗಳಲ್ಲಿ ಬೈಕ್ ರಾಲಿ ಸಂಚರಿಸಿ ಸಾಯಿಬಾಬಾ ಮಂದಿರದವರೆಗೆ ಭವ್ಯ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಸಾಯಿಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಮಹೋತ್ಸವಕ್ಕೆ ಚಾಲನೆ ನೀಡಬೇಕು ಎಂದು ಮನವಿ ಮಾಡಿದರು.
ಜುಲೈ 28ರಂದು ಬೆಳಿಗ್ಗೆ 8.30ಕ್ಕೆ ಗ್ರಾಮದೇವತೆ ಚಳ್ಳಕೆರಮ್ಮ ದೇವಸ್ಥಾನದಿಂದ ಶ್ರೀ ಸಾಯಿ ಶೋಭಾಯಾತ್ರೆ ಆರಂಭವಾಗಲಿದೆ. ಗುರು ಶ್ರೀ ಕರಿಬಸವ ಅಜ್ಜಯ್ಯ ಸ್ವಾಮಿ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಕರಿಬಸವ ಸ್ವಾಮೀಜಿ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಮಂಗಳವಾದ್ಯ ಹಾಗೂ ಜಾನಪದ ಕಲಾತಂಡಗಳ ಪ್ರದರ್ಶನ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಗುರುಪೂರ್ಣಿಮಾ ಮಹೋತ್ಸವದ ಉದ್ಘಾಟನಾ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.
ಜುಲೈ 29ರಂದು ಬೆಳಿಗ್ಗೆ 5.30ರಿಂದ ರಾತ್ರಿ 10 ಗಂಟೆಯವರೆಗೆ ಸಾಯಿಬಾಬಾರವರಿಗೆ ವಿಶೇಷ ಅಲಂಕಾರ, ಪೂಜಾ ಕೈಂಕರ್ಯ, ಸಾಮೂಹಿಕ ಶ್ರೀ ಸಾಯಿ ಸತ್ಯನಾರಾಯಣಸ್ವಾಮಿ ವ್ರತ, ಕ್ಷೀರಾಭಿಷೇಕ, ಪಲ್ಲಕ್ಕಿ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಜುಲೈ 29ರಂದು ಬೆಳಿಗ್ಗೆ 8 ಗಂಟೆಯಿಂದ ಸಾಮೂಹಿಕ ಶ್ರೀ ಸಾಯಿ ಸತ್ಯನಾರಾಯಣಸ್ವಾಮಿ ವ್ರತ ಪೂಜೆಯನ್ನು ಆಯೋಜಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಈ ಭಾಗದ ಜನರ ನೆಮ್ಮದಿ ಮತ್ತು ವ್ಯಾಪಾರಾಭಿವೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ನ ಕಾರ್ಯದರ್ಶಿ ಪ್ರಸಾದ್ ವಿಕಾಸ್ ಸಿ ಆರ್ ಶ್ರೀನಾಥ್ ಕೆ ನಾಗೇಶ್ ಬಿ ಸಿ ವೆಂಕಟೇಶಮೂರ್ತಿ ಬಿ ಸಿ ಸತೀಶ್ ಕುಮಾರ್ ಕಾರ್ತಿಕ್ ಯೋಜನೆ ಮತ್ತು ಪ್ರಚಾರ ಸಮಿತಿ ಮುಖ್ಯಸ್ಥ ಬಿ.ವಿ. ಚಿದಾನಂದಮೂರ್ತಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












