ನವದೆಹಲಿ: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ನೀಟ್-ಯುಜಿ (NEET-UG) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ.ಈ ಬೆಳವಣಿಗೆಯೊಂದಿಗೆ ಕಳೆದ ಹಲವು ವಾರಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ತೆರೆ ಬಿದ್ದಿದೆ. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಜೆಪಿ (CJP) ಸಂಘಟನೆ ತನ್ನ ಹೋರಾಟವನ್ನು ಅಧಿಕೃತವಾಗಿ ಹಿಂಪಡೆಯುವುದಾಗಿ ಪ್ರಕಟಿಸಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಶಾಂತಿಯುತವಾಗಿ ತಮ್ಮ ತಮ್ಮ ಊರುಗಳಿಗೆ ಮರಳುವಂತೆ ಮನವಿ ಮಾಡಿದೆ.
ಕಳೆದ ಐದು ವಾರಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಸಾವಿರಾರು ವಿದ್ಯಾರ್ಥಿಗಳು ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಬಿಸಿಲು, ಮಳೆ ಹಾಗೂ ಪೊಲೀಸ್ ಕ್ರಮಗಳ ನಡುವೆಯೂ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳಿಂದ ಹಿಂದೆ ಸರಿಯದೆ ಹೋರಾಟ ಮುಂದುವರಿಸಿದ್ದರು.ಪ್ರತಿಭಟನೆಯ ನಡುವೆ ಕೇಂದ್ರ ಸರ್ಕಾರ ಈಗಾಗಲೇ ಶಿಕ್ಷಣ ಇಲಾಖೆಯ ಕೆಲ ಆಡಳಿತಾತ್ಮಕ ಬದಲಾವಣೆಗಳನ್ನು ಕೈಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯಲ್ಲಿ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿತ್ತು. ಆದಾಗ್ಯೂ, ಶಿಕ್ಷಣ ಸಚಿವರ ರಾಜೀನಾಮೆ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದರು.

ಈ ಹೋರಾಟದ ಪ್ರಮುಖ ಮುಖವಾಗಿದ್ದ ಸಿಜೆಪಿ ಸಂಘಟನೆಯ ಸ್ಥಾಪಕ ಅಭಿಜೀತ್ ದಿಪ್ಕೆ ಅವರ ಪಾತ್ರ ದೇಶದ ಗಮನ ಸೆಳೆದಿತ್ತು. ಈ ಹೋರಾಟದ ವೇಳೆ ತಮ್ಮ ಮಗನ ಸುರಕ್ಷತೆಯ ಬಗ್ಗೆ ಆತಂಕದಲ್ಲಿದ್ದ ತಾಯಿ ಅನಿತಾ ದಿಪ್ಕೆ, ಇದೀಗ ಹೋರಾಟ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ದೇಶದ ವಿದ್ಯಾರ್ಥಿಗಳ ಪರವಾಗಿ ಮಗ ನಡೆಸಿದ ಹೋರಾಟ ಹೆಮ್ಮೆ ತಂದಿದೆ ಎಂದು ಅವರು ಹೇಳಿದ್ದಾರೆ.ಇದೇ ವೇಳೆ, ರಾಷ್ಟ್ರ ರಾಜಧಾನಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್ ಮಾತನಾಡಿ, ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟಕ್ಕೆ ನ್ಯಾಯ ದೊರೆತಿದೆ ಎಂದು ತಿಳಿಸಿದ್ದಾರೆ.
ಪ್ರತಿಭಟನೆ ವೇಳೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವುದಾಗಿ ಅವರು ಹೇಳಿದ್ದಾರೆ.
ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸರ್ಕಾರದ ಕ್ರಮಗಳ ಬಳಿಕ, ನೀಟ್ ಪರೀಕ್ಷೆ ಕುರಿತ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಿಗೆ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿದೆ ಎಂದು ಸಂಘಟನೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










