ದಾವಣಗೆರೆ.ಜುಲೈ.27: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣ ಸಮೀಪದ ಸಾಗರಪೇಟೆಯಲ್ಲಿ ಚಿರತೆಯೊಂದರ ಭೀಕರ ದಾಳಿ ವರದಿಯಾಗಿದೆ.
ಸಾಗರಪೇಟೆ ಮುಖ್ಯ ರಸ್ತೆಯಲ್ಲಿರುವ ಮಟ್ಟೇರ ಹಾಲೇಶ್ ಎಂಬುವವರ ಮನೆಯ ಕಾಂಪೌಂಡ್ ಒಳಗೆ ಶುಕ್ರವಾರ ತಡರಾತ್ರಿ 12 ಗಂಟೆಯ ಸುಮಾರಿಗೆ ನುಗ್ಗಿದ ಚಿರತೆಯೊಂದು, ಮುಂಭಾಗದ ಅಂಗಳದಲ್ಲಿ ಮಲಗಿದ್ದ ಸಾಕು ನಾಯಿಯನ್ನು ಕಚ್ಚಿಕೊಂಡು ಕ್ಷಣಮಾತ್ರದಲ್ಲಿ ಮಾಯವಾಗಿದೆ. ಈ ಇಡೀ ಭೀತಿ ಹುಟ್ಟಿಸುವ ಘಟನೆ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.
ಸಂಜೆಯಾಗುತ್ತಿದ್ದಂತೆ ಗ್ರಾಮದಲ್ಲಿ ಭಯದ ವಾತಾವರಣ ಆವರಿಸುತ್ತಿದ್ದು, ಸಾಗರಪೇಟೆಯಿಂದ ಸೂಳೆಕೆರೆಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ 48ರ ಇಕ್ಕೆಲಗಳಲ್ಲಿರುವ ನಿವಾಸಿಗಳು ಹಾಗೂ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











