Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಭೆ: ಪ್ರಸನ್ನಾನಂದ ಶ್ರೀಗಳಿಗೆ ಮನವಿ ಸಲ್ಲಿಕೆ

---Advertisement---

 

ಚಿತ್ರದುರ್ಗ, ಜುಲೈ. 27 : ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಭೆಯಲ್ಲಿ, ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವಂತೆ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಮನವಿ ಸಲ್ಲಿಸಲಾಯಿತು.

 

ಸಭೆಯಲ್ಲಿ ಪ್ರಮುಖವಾಗಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿರುವ ಪ್ರಕರಣದ ಪ್ರಸ್ತುತ ಸ್ಥಿತಿಗತಿ, ನೌಕರರ ಮೇಲಾಗುತ್ತಿರುವ ದೌರ್ಜನ್ಯಗಳು ಮತ್ತು ಸಮಸ್ಯೆಗಳು ಹಾಗೂ ನಾಯಕ ನೌಕರರ ಸಂಘಟನೆ ಬಲಪಡಿಸುವ ಕುರಿತು ವಿಸ್ತøತ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಮೂರ್ತಿ, ಚಿತ್ರದುರ್ಗ ಜಿಲ್ಲಾಧ್ಯಕ್ಷ ರಾಜಪ್ಪ, ದಾವಣಗೆರೆ ಜಿಲ್ಲಾಧ್ಯಕ್ಷ ಕೆ.ಸಿ. ಶ್ರೀನಿವಾಸಮೂರ್ತಿ, ಮೈಸೂರು ಜಿಲ್ಲಾಧ್ಯಕ್ಷ ಮಂಜುನಾಥ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಮಹಾಂತೇಶ್ ಹಾಗೂ ತಾಲೂಕು ಅಧ್ಯಕ್ಷರಾದ ಸುವರ್ಣಮ್ಮ ಮತ್ತು ಕರಿಬಸಣ್ಣ, ವಾಲ್ಮೀಕಿ ಶಿಕ್ಷಕರ ವೇದಿಕೆಯ ಸುದರ್ಶನ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಪ್ರಶಾಂತ್ ಕುಮಾರ್, ಸರ್ಕಾರಿ ಅಭಿಯೋಜಕಿ ರೂಪಾ, ವಕೀಲರಾದ ಅಶೋಕ್, ಜಯಣ್ಣ, ಶರಣಪ್ಪ, ಡಾ. ಹನುಮಂತಪ್ಪ, ಡಾ. ಗಿರೀಶನಾಯಕ್, ಡಾ. ವಿಜಯಕುಮಾರ್, ಡಾ. ಮದಕರಿ, ಶ್ರೀನಿವಾಸ ನಾಯಕ, ಚನ್ನಕೇಶವ, ವಸಂತಕುಮಾರ್, ಎಸ್‍ಬಿಐ ಪ್ರಬಂಧಕ ರಮೇಶ್ ಸೇರಿದಂತೆ ರಾಜಣ್ಣ, ಗೌರಮ್ಮ, ಬೊಮ್ಮಲಿಂಗಣ್ಣ, ಕರಿಯಣ್ಣ, ವೆಂಕಟೇಶ್, ಬಸವರಾಜ್, ಪ್ರಕಾಶ್, ಕರಿಸಿದ್ದಪ್ಪ, ಪರಮೇಶ್ವರಪ್ಪ, ಪುಷ್ಪಲತಾ ಹಾಗೂ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now