ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಜು. 27 : ಯಾವುದೇ ರಾಜಕೀಯ ಪಕ್ಷಗಳ ಬೆಂಬಲವಿಲ್ಲದೆ ಯುವ ಸಮುದಾಯ ಮತ್ತು ವಿದ್ಯಾರ್ಥಿಗಳು ಒಂದಾಗಿ ನಡೆಸಿದ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಕೇಂದ್ರ ಶಿಕ್ಷಣ ಸಚಿವರ ಧೋರಣೆ ಹಾಗೂ ಎನ್‍ಟಿಎ ಸಂಸ್ಥೆಯ ದುರಾಡಳಿತದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಪಾಯಕ್ಕೆ ಸಿಲುಕಿದೆ ಎಂದು ಅಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಜಗದೀಶ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಕೇವಲ ರಾಜಕೀಯ ಲಾಭಕ್ಕಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಜನಸಾಮಾನ್ಯರ ಮತ್ತು ಯುವಕರ ಗಮನವನ್ನು ಬೇರೆಡೆ ಸೆಳೆಯಲು ಧರ್ಮ ಹಾಗೂ ಹಿಂದುತ್ವದ ಹೆಸರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ನಡೆಸಿದ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಹುದ್ದೆಗಳ ನೇಮಕಾತಿಗೆ ಮುಂದಾದಂತೆ, ಈಗಲೂ ಯುವ ಸಮುದಾಯ ಎಚ್ಚೆತ್ತುಕೊಳ್ಳದಿದ್ದರೆ ಭವಿಷ್ಯದಲ್ಲಿ ಉದ್ಯೋಗ ಸಿಗುವುದು ದುಸ್ತರವಾಗಲಿದೆ ಎಂದ ದೂರಿದರು.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 3,50,000 ಹುದ್ದೆಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಭರ್ತಿ ಮಾಡಬೇಕು. ಖಾಸಗೀಕರಣಕ್ಕೆ ಆದ್ಯತೆ ನೀಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಕ್ರಿಯೆಯನ್ನು ಕೈಬಿಡಬೇಕು. ಭವಿಷ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನತೆ ತಮ್ಮ ಹಕ್ಕುಗಳಿಗಾಗಿ ನಡೆಸುವ ಪ್ರತಿಯೊಂದು ಸತ್ಯಾಗ್ರಹ ಮತ್ತು ಹೋರಾಟಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು. ಬಡ ಹಾಗೂ ಹಿಂದುಳಿದ ವರ್ಗಗಳ ಯುವಕರಿಗೆ ಸೂಕ್ತ ಉದ್ಯೋಗ ಮತ್ತು ಶಿಕ್ಷಣ ಸಿಗಬೇಕಾದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳು ಈಡೇರಬೇಕು. ಕೇವಲ ಉಚಿತ ಭಾಗ್ಯಗಳನ್ನು ನೀಡುವುದಕ್ಕಿಂತ ಯುವಕರಿಗೆ ಗುಣಮಟ್ಟದ ಶಿಕ್ಷಣ ಮತ್ತು ಉದ್ಯೋಗಾವಕಾಶ ಕಲ್ಪಿಸುವುದೇ ಸರ್ಕಾರದ ನಿಜವಾದ ಕರ್ತವ್ಯ ಎಂದು ತಿಳಿಸಿದರು.
ಯಾವುದೇ ರಾಜಕೀಯ ಪಕ್ಷಗಳ ಬೆಂಬಲವಿಲ್ಲದೆ ಯುವ ಸಮುದಾಯ ಮತ್ತು ವಿದ್ಯಾರ್ಥಿಗಳು ಒಂದಾಗಿ ನಡೆಸಿದ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ನೀಟ್ ಪರೀಕ್ಷೆಯ ಅಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಧೋರಣೆಗಳ ವಿರುದ್ಧ 37 ದಿನಗಳ ಕಾಲ ಸುದೀರ್ಘ ಉಪವಾಸ ಸತ್ಯಾಗ್ರಹ ನಡೆಸಿದ ಸಿಜೆಪಿ ಹಾಗೂ ವಿದ್ಯಾರ್ಥಿ ಸಂಘಟನೆಗಳ ಶ್ರಮವನ್ನು ಅವರು ಮುಕ್ತಕಂಠದಿಂದ ಶ್ಲಾಘಿಸಿ ಕೇಂದ್ರ ಶಿಕ್ಷಣ ಸಚಿವರ ಧೋರಣೆ ಹಾಗೂ ಎನ್‍ಟಿಎ (ಓಖಿಂ) ಸಂಸ್ಥೆಯ ದುರಾಡಳಿತದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಪಾಯಕ್ಕೆ ಸಿಲುಕಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಗೋಷ್ಟಿಯಲ್ಲಿ ರಾಮಣ್ಣ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಮಹಿಳಾ ಅಧ್ಯಕ್ಷೆ ಜ್ಯೋತಿ ಹಾಗೂ ಕಾರ್ಯದರ್ಶಿ ವಿನೋದ್‍ಮ್ಮ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












