ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಜು. 27 : ಚಿತ್ರದುರ್ಗ ನಗರದ ಕಬೀರಾನಂದ ನಗರದಲ್ಲಿನ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ ಗುರು ಪೂರ್ಣಿಮಾ ಅಂಗವಾಗಿ ಜು. 29 ರ ಬುಧವಾರ ಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರಾದ ಗಣಪತಿ ಶಾಸ್ತ್ರಿ ತಿಳಿಸಿದ್ದಾರೆ.
ಅಂದು ಸಂಜೆ 7 ಗಂಟೆಗೆ ಶ್ರೀ ಸದ್ಗುರು ಕಬೀರಾನಂದಾಶ್ರಮದ ಶ್ರೀ ಸದ್ಗುರು ಶ್ರೀ ಶಿವಲಿಂಗಾನಂದ ಮಹಾ ಸ್ವಾಮಿಗಳವರ ಪಾದಪೂಜೆಯೊಂದಿಗೆ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಶ್ರೀ ಮಠದ ಭಕ್ತರು ಆಗಮಿಸುವುದರ ಮೂಲಕ ಗುರುವಿನ ಕೃಪಾಶೀರ್ವಾದಕ್ಕೆ ಪಾತ್ರರಾಗುವಂತೆ ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











