Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ!

---Advertisement---

ಸುದ್ದಿಒನ್, ದಾವಣಗೆರೆ, ಜುಲೈ. 27 :  ಮಧ್ಯ ಕರ್ನಾಟಕದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಶ್ರೀ ದುರ್ಗಾಂಬಿಕಾ (ದುಗ್ಗಮ್ಮ) ದೇವಸ್ಥಾನದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇವಸ್ಥಾನದ ದೇವಿಯ ಚಿನ್ನಾಭರಣವನ್ನು ಪೂಜಾರಿಯೇ ಕಳ್ಳತನ ಮಾಡಿ ಮಾರಾಟ ಮಾಡಿದ್ದಾರೆ ಎಂಬ ಆರೋಪ ದೇವಸ್ಥಾನ ಸಮಿತಿಯ ಲೆಕ್ಕಪತ್ರ ಪರಿಶೀಲನೆ ವೇಳೆ ಬಹಿರಂಗವಾಗಿದ್ದು, ಈ ಕುರಿತು ನಡೆದ ಸಭೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಳೆದ ಶನಿವಾರ ರಾತ್ರಿ ದೇವಸ್ಥಾನದ ಆವರಣದಲ್ಲಿ ನಡೆದ ಸಮಿತಿ ಸಭೆಯಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಆರೋಪಿತ ಪೂಜಾರಿ ಹಾಗೂ ಚಿನ್ನ ಖರೀದಿಸಿದ್ದಾನೆ ಎನ್ನಲಾದ ವ್ಯಾಪಾರಿಯನ್ನು ಎದುರು ಕರೆಸಿ ಪ್ರಶ್ನಿಸಿರುವ ದೃಶ್ಯ ವೈರಲ್ ವಿಡಿಯೊದಲ್ಲಿ ಕಂಡುಬಂದಿದೆ.
ಸಭೆಯ ವೇಳೆ, “ವಾರದೊಳಗೆ ಕಳುವಾಗಿರುವ ಎಲ್ಲಾ ಚಿನ್ನಾಭರಣಗಳನ್ನು ಮರಳಿಸಬೇಕು. ಇಲ್ಲದಿದ್ದರೆ ಇಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು” ಎಂದು ಸಮಿತಿ ಅಧ್ಯಕ್ಷರು ಎಚ್ಚರಿಕೆ ನೀಡಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಆದರೆ, ಕಳುವಾಗಿರುವ ಚಿನ್ನಾಭರಣದ ನಿಖರ ಪ್ರಮಾಣ ಮತ್ತು ಮೌಲ್ಯದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ.

ಈ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಯಶವಂತರಾವ್ ಜಾಧವ್, ದೇವಸ್ಥಾನದಲ್ಲಿ ದೇವಿಯ ಚಿನ್ನಾಭರಣ ಕಳ್ಳತನವಾಗಿರುವುದು ಅತ್ಯಂತ ಗಂಭೀರ ವಿಷಯವಾಗಿದ್ದು, ಇದರ ನೈತಿಕ ಹೊಣೆ ಹೊತ್ತು ದೇವಸ್ಥಾನ ಸಮಿತಿಯ ಅಧ್ಯಕ್ಷ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಸಮಿತಿಯ ಎಲ್ಲ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಭಕ್ತರಲ್ಲಿ ಆತಂಕ ಮತ್ತು ಅಸಮಾಧಾನ ವ್ಯಕ್ತವಾಗಿದ್ದು, ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now