Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ .1ರಂದು ಮೈಸೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿವೇಕಾನಂದ ಸ್ಮಾರಕ ಮತ್ತು ಯುವಕೇಂದ್ರ ಲೋಕಾರ್ಪಣೆ

---Advertisement---

ಮೈಸೂರು.ಜುಲೈ.28: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ಮುಕ್ತಿದಾನಂದ ಜೀ ಮಹಾರಾಜ್, ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯ ಪವಿತ್ರ ಸ್ಥಳದಲ್ಲಿ ₹45 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬೃಹತ್ ‘ಸ್ವಾಮಿ ವಿವೇಕಾನಂದ ಸ್ಮಾರಕ’ ಹಾಗೂ ‘ಸಾಂಸ್ಕೃತಿಕ ಯುವ ಕೇಂದ್ರ’ವನ್ನು ಪ್ರಧಾನಿಯವರು ಉದ್ಘಾಟಿಸಲಿದ್ದಾರೆ. ಯುವಜನತೆಯಲ್ಲಿ ಆಧ್ಯಾತ್ಮಿಕ ಚಿಂತನೆ, ಸಾಂಸ್ಕೃತಿಕ ಪ್ರಜ್ಞೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಈ ಯುವ ಕೇಂದ್ರವನ್ನು ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಲೋಕಾರ್ಪಣಾ ಕಾರ್ಯಕ್ರಮದ ನಂತರ ಪ್ರಧಾನಿಯವರು ನಗರದ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಪ್ರಾರ್ಥನಾ ಮಂದಿರದ ಆವರಣದಲ್ಲಿ ಆಯೋಜಿಸಲಾಗಿರುವ ವಿಶೇಷ ಸಭೆಯಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6,000ಕ್ಕೂ ಹೆಚ್ಚು ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದ್ದು, ಭದ್ರತಾ ಹಿತದೃಷ್ಟಿಯಿಂದ ವಿಶೇಷ ಪ್ರವೇಶ ಪತ್ರ (Pass) ಕಡ್ಡಾಯಗೊಳಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now