Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಬಿಜೆಪಿ ಬರ ಅಧ್ಯಯನ ತಂಡ ಭೇಟಿ: ಕೆ.ಎಸ್. ನವೀನ್ ಮಾಹಿತಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 28 : ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರ ನೇತೃತ್ವದ ರಾಜ್ಯ ತಂಡ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಬರಪೀಡಿತ ಪ್ರದೇಶಗಳ ವೀಕ್ಷಣೆ ಹಾಗೂ ರೈತರ ಕಷ್ಟ-ನಷ್ಟಗಳನ್ನು ಆಲಿಸಲು ಬರ ಅಧ್ಯಯನ ತಂಡವು ಆಗಮಿಸುತ್ತಿದೆ ಎಂದು ಸಂಯೋಜಕರು, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್ ನವೀನ್ ತಿಳಿಸಿದ್ದಾರೆ.

ರಾಜ್ಯದಲ್ಲಿ ತಲೆದೂರಿರುವ ಬರದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಸಹಾ ರಾಜ್ಯದಲ್ಲಿ ಬರದ ಬಗ್ಗೆ ಅಧ್ಯಯನವನ್ನು ಪ್ರಾರಂಭ ಮಾಡಿದೆ ಈ ಹಿನ್ನಲೆಯಲ್ಲಿ ಜು. 29ರಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಆಶೋಕ್ ರವರ ನೇತೃತ್ವದ ತಂಡ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡುವುದರ ಮೂಲಕ ಬರ ಪರಿಶೀಲನೆಯನ್ನು ನಡೆಸಲಿದ್ದಾರೆ. ರೈತರ ಬಿತ್ತನೆಯ ಸ್ಥಿತಿ, ಪ್ರದೇಶ ವೀಕ್ಷಣೆ, ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕರು ಹಾಗೂ ಜಾನುವಾರುಗಳು ಎದುರಿಸುತ್ತಿರುವ ತೊಂದರೆಗಳು, ಆಣೆಕಟ್ಟುಗಳು ಹಾಗೂ ಕೆರೆ-ಕಟ್ಟೆಗಳಲ್ಲಿ ನೀರಿನ ಸ್ಥಿತಿಯನ್ನು ಪರಿಶೀಲಿಸಿ, ರಾಜ್ಯದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಿ, ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಲು ಕರ್ನಾಟಕ ಬಿಜೆಪಿ ರಾಜ್ಯ ಘಟಕದ ಹಿರಿಯರ ತಂಡವು ಬುಧವಾರ ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಿದೆ ಎಂದರು.

ಜು. 29ರ ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿಗೆ ಆಗಮಿಸುವ ತಂಡ ಅಲ್ಲಿನ ಹಳ್ಳಿಗಳಲ್ಲಿನ ಜಮೀನುಗಳಿಗೆ ಭೇಟಿ ನೀಡಿ ಅಲ್ಲಿನ ಬೆಳೆಯ ಬಗ್ಗೆ ಅಧ್ಯಯನ ನಡೆಸಿ ರೈತರೊಂದಿಗೆ ಮಾತುಕಥೆ ನಡೆಸಲಿದ್ದಾರೆ, ತದ ನಂತರ ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಟಿಯನ್ನು ನಡೆಸಿ ದಾವಣಗೆರೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಅನಗೋಡು ಭಾಗದ ರೈತರ ಜಮೀನುಗಳಿಗೆ ಭೇಟಿ ನೀಡಲಿದ್ದಾರೆ. ತದ ನಂತರ ದಾವಣಗೆರೆಯಲ್ಲಿ ಪತ್ರಿಕಾ ಗೋಷ್ಟಿ ನಡೆಸಿ, ಜಗಳೂರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕು ರೈತರ ಜಮೀನುಗಳಿಗೆ ಭೇಟಿ ನೀಡಿ ಬಳ್ಳಾರಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಕೆ.ಎಸ್ ನವೀನ್ ತಿಳಿಸಿದ್ದಾರೆ.

ಬರ ಮತ್ತು ಅತಿವೃಷ್ಟಿಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಸ್ಥಳ ಪರಿಶೀಲನೆ ನಡೆಸಿ, ಜನರ ಅಹವಾಲುಗಳನ್ನು ಆಲಿಸಿ, ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿದೆ. ನಮ್ಮ ರೈತರ ಧ್ವನಿಯಾಗಲು, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಹಮ್ಮಿಕೊಂಡಿರುವ ಈ ಬರ ಅಧ್ಯಯನ ಕಾರ್ಯಕ್ರಮಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರು, ರೈತ ಬಾಂಧವರು ಭಾಗವಹಿಸಬೇಕಾಗಿ ವಿನಂತಿ ಮಾಡಿದ್ದು, ಆರ್.ಆಶೋಕ್ ರವರ ನೇತೃತ್ವದ ತಂಡದಲ್ಲಿ ಶಾಸಕರಾದ ಜನಾರ್ಧನ ರೆಡ್ಡಿ, ಭೈರತಿ ಬಸವರಾಜು, ಡಾ.ಎಂ.ಚಂದ್ರಪ್ಪ, ಬಿ.ಪಿ.ಹರೀಶ್, ಕೃಷ್ಣಾ ನಾಯಕ್ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ರಾ,ಹೆ.4ರಲ್ಲಿನ ಮೇಟಿಕುರ್ಕೆಯಿಂದ ಸೂರಗೊಂಡನಹಳ್ಳಿಯಲ್ಲಿ ರಸ್ತೆಯಲ್ಲಿನ ರೈತರ ಹೊಲಗಳನ್ನು ಬೇಟಿ ನೀಡಲಿದ್ದಾರೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now