Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್; ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ!

---Advertisement---

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್, 12 ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.

ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ : www.kslsa.kar.nic.in   ಸಹಾಯವಾಣಿ ಸಂಖ್ಯೆ 15100 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now