Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು: ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ; ಪೋಕ್ಸೋ ಪ್ರಕರಣ ದಾಖಲು

---Advertisement---

ಚಿತ್ರದುರ್ಗ.ಜುಲೈ.29: ಚಿತ್ರದುರ್ಗ ಜಿಲ್ಲೆಯ ಹಿರಿಯೂರುನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಖಾಸಗಿ ಕಾಲೇಜೊಂದರಲ್ಲಿ ಓದುತ್ತಿದ್ದ 17 ವರ್ಷ 5 ತಿಂಗಳ ವಯಸ್ಸಿನ ಬಾಲಕಿಯು ಹೊರವಲಯದ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿದ್ದಳು. ಸುಮಾರು ಒಂದು ವರ್ಷದ ಹಿಂದೆ ತಾಲ್ಲೂಕಿನ ಹಾಲ ಮಾದೇನಹಳ್ಳಿಯ ಗೂಡ್ಸ್ ವಾಹನ ಚಾಲಕ ಕರಿಯಣ್ಣ (22) ಎಂಬಾತನ ಪರಿಚಯವಾಗಿದ್ದು, ಕಾಲಕ್ರಮೇಣ ಅದು ಪ್ರೇಮಕ್ಕೆ ತಿರುಗಿತ್ತು.

ಕಳೆದ ಭಾನುವಾರ ಅಪ್ರಾಪ್ತೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆ ತಿಳಿದ ತಕ್ಷಣ ವಿದ್ಯಾರ್ಥಿನಿ ತಂಗಿದ್ದ ಹಾಸ್ಟೆಲ್‌ನ ವಾರ್ಡನ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಕರಿಯಣ್ಣನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಕರಿಯಣ್ಣ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now