ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ,ಜುಲೈ. 29 : ಬೆಂಗಳೂರಿನಲ್ಲಿ ನಡೆದ ವಿಫಾ ಸೌತ್‍ಜೋನ್ ಟೇಕ್ವಾಂಡೋ ಚಾಂಪಿಯನ್‍ಶಿಪ್‍ನಲ್ಲಿ ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಎಂಟನೆ ತರಗತಿಯ ವಿದ್ಯಾರ್ಥಿಗಳಾದ ನಯನಶ್ರೀ, ಸಹನಾಗೌಡ, ನಿಕಿತಶ್ರಿ, ಜಾನ್ಹವಿ ಹಾಗೂ ಏಳನೆ ತರಗತಿಯ ವಿದ್ಯಾರ್ಥಿಗಳಾದ ಜೀವನ್, ಆರಾಧ್ಯ, ಗುರುಚಂದನ್, ಇವರುಗಳು ಐದು ಬಂಗಾರ ಹಾಗೂ ಮೂರು ಬೆಳ್ಳಿ ಪದಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ ಡಾ.ಎಂ.ಚಂದ್ರಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಡೀನ್ ಅನಂತರಾಮು, ಶೈಕ್ಷಣಿಕ ನಿರ್ದೇಶಕರಾದ ಸಂಪತ್‍ಕುಮಾರ್ ಸಿ.ಡಿ. ಪ್ರಾಂಶುಪಾಲರಾದ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕಿ ಜರಿನಾ, ಪಿ.ಆರ್.ಓ.ರವಿಕುಮಾರ್, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಪದಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.









