ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯಾಗಿದೆ. ಈ ಸಂಬಂಧ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಬೆರಳು ಮಾಡಿ ತೋರಿಸುತ್ತಿದ್ದಾರೆ. ಬೆಳಗ್ಗೆ ಈಶ್ವರಪ್ಪ ಅವರು ಡಿಕೆಶಿ ಮೇಲೆ ಆರೋಪಿಸಿದ್ದರು. ಇದೀಗ ದಾವಣಗೆರೆಯ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೂಡ ಇದೊಇಗ ಕಾಂಗ್ರೆಸ್ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.
ಶಿವಮೊಗ್ಗದಲ್ಲಿ ಅಪ್ಪಟ ದೇಶಪ್ರೇಮಿ 21-22 ವರ್ಷದ ಯುವಕನ ಬರ್ಬರ ಹತ್ಯೆಯಾಗಿದೆ. ಈ ಘಟನೆಯನ್ನ ತೀವ್ರವಾಗಿ ಖಂಡಿಸುತ್ತೇನೆ. ಆತನ ಹತ್ಯೆ ಬಗ್ಗೆ ಮಾಹಿತಿ ಇದೆ. ಆತನ ಹತ್ಯೆಗೆ ಕಾರಣ ಕಾಂಗ್ರೆಸ್ ನೀಡಿದ ಹೇಳಿಕೆಯೇ ಆಗಿದೆ. ಈ ಹತ್ಯೆಯ ಹಿಂದೆ ಅಂತರಾಷ್ಟ್ರೀಯ ಸಂಘಟನೆಗಳ ಕೈವಾಡವಿದೆ ಎಂದಿದ್ದಾರೆ.
ಪ್ರಕರಣ ತನಿಖೆ ಹಂತದಲ್ಲಿದೆ. ನಮ್ಮ ಸರ್ಕಾರ ಸಿಎಂ ಬಸವರಾಜ್ ಬೊಮ್ಮಾಯಿ, ಗೃಹ ಸಚಿವರು ತನಿಖೆ ನಡೆಸಿ ಈ ಹತ್ಯೆಗೆ ಕಾರಣ ಯಾರು ಎಂಬುದನ್ನ ತಿಳಿದು ಶಿಕ್ಷೆ ನೀಡಬೇಕೆಂದು ಮನವಿ ಮಾಡ್ತೇನೆ. ಕಾಂಗ್ರೆಸ್ ಮುಖಂಡರಿಗೆ ನೈತಿಕ ಹಕ್ಕಿಲ್ಲ. ಈ ಘಟನೆಗೆ ಕಾಂಗ್ರೆಸ್ ಮುಖಂಡರ ಹೇಳಿಕೆಯೇ ಕಾರಣ.ಮುಗ್ದ ವಿದ್ಯಾರ್ಥಿಗಳ ವಿಚಾರದಲ್ಲೂ ಹಿಜಾಬ್ ಎಳೆದು ತಂದಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.