Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆ. 23 ರಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿಶೇಷ ತರಬೇತಿ ಕಾರ್ಯಕ್ರಮ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.22) :  ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕುಗಳಲ್ಲಿ ಬರುವ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವೂ ಫೆ. 23ರ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಬಿ.ಎಲ್.ಗೌಡ ಲೇಟ್‍ನ ಸಹಕಾರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಾಟೀಲ್ ತಿಳಿಸಿದ್ದಾರೆ.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಡಿ.ಸುಧಾಕರ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ಅಧ್ಯಕ್ಷರಾದ ಬಿ.ವೀರಭದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಮಹಾ ಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್‍ನ  ನಿರ್ದೆಶಕರು ಆರ್.ರಾಮರೆಡ್ಡಿ, ಎಸ್.ಆರ್.ಗಿರೀಶ್, ಯೂನಿಯನ್ ನ ಉಪಾಧ್ಯಕ್ಷರಾದ ಎನ್.ಮಂಜುನಾಥ್, ನಿರ್ದೇಶಕರುಗಳಾದ ಜಿಂಕಲ್ ಬಸವರಾಜು, ಹೆಚ್.ಎಂ ರೇವಣ್ಣ, ಬಿ.ಸಿ.ಸಂಜೀವಮೂರ್ತಿ, ಜಿ.ಈ ಅಜ್ಜಪ್ಪ, ಹೆಚ್.ಎನ್.ತಿಪ್ಪೇಸ್ವಾಮಿ ಜೆ. ಶಿವಪ್ರಕಾಶ್, ಹೆಚ್.ವಿ.ಪ್ರತಾಪ್ ಸಿಂಹ, ಕೆ.ಹೆಚ್.ಜಗನ್ನಾಥ್, ಶ್ರೀಮತಿ ರತ್ನಮ್ಮ, ಮಹಾಂತೇಶ್ ಟಿ. ಜಿಲ್ಲಾ ಸಹಕಾರ ಕೇಂದ್ರ  ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೆಶಕರಾದ ಇಲ್ಯಾಸ್ ಉಲ್ಲಾ ಷರೀಫ್, ಸಹಕಾರ ಸಂಘಗಳ ಉಪ ನಿಭಂದಕರಾದ ಆರ್.ಜೆ.ಕಾಂತರಾಜ್, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪ ನಿರ್ದೇಶಕರಾದ ಕೆ.ಮಹೇಶ್ವರಪ್ಪ ಸಹಾಯಕ ನಿಬಂಧಕರಾದ ಶ್ರೀಮತಿ ಲಾವಣ್ಯ ಭಾಗವಹಿಸಲಿದ್ದಾರೆ.

ಸಹಕಾರ ಸಂಘಗಳ ಕಾಯ್ದೆ ಕಾನೂನು ತಿದ್ದುಪಡಿಯ ಮುಖ್ಯಾಂಶಗಳು, ಸಹಕಾರ ಸಂಘಗಳಲ್ಲಿ ಹಣಕಾಸು ನಿರ್ವಹಣೆ ಮತ್ತು ಲಾಭದಾಯಕತೆ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಕೋಲಾರದ ಬಂಗಾರುಪೇಟೆಯ ಸಹಕಾರ ಅಭೀವೃದ್ದಿ ಅಧಿಕಾರಿ ಎಂ.ಜಗದೀಶ್ ಉಪನ್ಯಾಸ ನೀಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಕ್ತದಾನ ಮಾಡುವ ಗುಣ ಬೆಳೆಸಿಕೊಳ್ಳಿ : ಶಿವಲಿಂಗಾನಂದ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ನ. 23 : ರಕ್ತವನ್ನು ಕೃತಕವಾಗಿ ತಯಾರು ಮಾಡಲು ಬರುವುದಿಲ್ಲ, ಅಲ್ಲದೆ ಯಾವ ಪ್ರಾಣಿಗಳ ರಕ್ತವನ್ನು

ಸೆಡೆಗಳು ಎಂದಿದ್ದ ರಜತ್ ಗೆ ಬೆವರಿಳಿಸಿದ ಬಾದ್ ಶಾ..!

ಬಿಗ್ ಬಾಸ್ ಕನ್ನಡ ಸೀಸನ್ 11ಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ರಜತ್ ಹಾಗೂ ಶೋಭಾ ಶೆಟ್ಟಿ ಬಂದಿದ್ದಾರೆ. ರಜತ್ ಆರಂಭದಿಂದಾನು ಒಳ್ಳೆ ರೌಡಿಸಂ ತೋರಿಸುವ ರೀತಿಯೇ ಆಟವಾಡುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇರಬೇಕು

ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ : ಪ್ರೊ.ಹೆಚ್.ಎ.ಭಿಕ್ಷಾವರ್ತಿಮಠ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ನಿತ್ಯ ವಿದ್ಯಾರ್ಥಿಯಾಗಿರುವವನೆ ಅತ್ಯುತ್ತಮ ಶಿಕ್ಷಕ. ಕೇವಲ ಪದವಿ ಪಡೆದರೆ ಸಾಲದು. ಶಿಕ್ಷಣದ

error: Content is protected !!