Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಭೋವಿ ಸಮುದಾಯದ ಮಹಿಳೆಯರಿಗೆ ಸಿಹಿಸುದ್ದಿ : ಎಲ್ಲಾ ಜಿಲ್ಲೆಗಳಲ್ಲೂ ಉಚಿತ ಹೊಲಿಗೆ ತರಬೇತಿ: ಅಧ್ಯಕ್ಷ ಎಂ. ರಾಮಪ್ಪ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 30 : ಮುಂಬರುವ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಸಮುದಾಯದ ಮಹಿಳೆಯರಿಗೆ ಉಚಿತ ಟೈಲರಿಂಗ್ (ಹೊಲಿಗೆ) ತರಬೇತಿ ಶಿಬಿರಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ತಿಳಿಸಿದರು.

ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಚಿತ್ರದುರ್ಗ ನಗರದಲ್ಲಿ ಆಯೋಜಿಸಲಾಗಿರುವ ಉಚಿತ ಹೊಲಿಗೆ ತರಬೇತಿ ಶಿಬಿರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಸುದ್ದಿಗಾ ರರೊಂದಿಗೆ ಮಾತನಾಡಿದ ರಾಮಪ್ಪರವರು ಭೋವಿ ವಡ್ಡರ ಜನಾಂಗದ ಹಾಗೂ ಬಡ ಸಮುದಾಯದ ಜನರಿಗೆ ಸ್ವಾವಲಂಬನೆ ಮತ್ತು ಆರ್ಥಿಕ ಅನುಕೂಲ ಕಲ್ಪಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಸಮಾಜದ ಬಡ ಹಾಗೂ ಹಿಂದುಳಿದ ವರ್ಗದವರ ಸಬಲೀಕರಣಕ್ಕಾಗಿ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಪ್ರಯೋಗಿಕವಾಗಿ ಚಿತ್ರದುರ್ಗ ಹಾಗೂ ಮೈಸೂರಿನಲ್ಲಿ ಸಮುದಾಯದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿಯನ್ನು ನೀಡಲಾಗುತ್ತಿದೆ, ಚಿತ್ರದುರ್ಗದ ಕೇಂದ್ರದಲ್ಲಿ ಪ್ರಸ್ತುತ 150 ಮಹಿಳೆಯರು ತರಬೇತಿ ಪಡೆಯುತ್ತಿದ್ದಾರೆ. ಪ್ರಸ್ತುತ ಚಿತ್ರದುರ್ಗದಲ್ಲಿ ನಡೆಯುತ್ತಿರುವ 60 ದಿನಗಳ ಉಚಿತ ಹೊಲಿಗೆ ತರಬೇತಿ ಶಿಬಿರವು ಯಶಸ್ವಿಯಾಗಿ ಪೂರ್ಣಗೊಳ್ಳುವ ಹಂತ ತಲುಪಿದ್ದು, ಇನ್ನು 10 ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ.ತರಬೇತಿ ಪೂರ್ಣಗೊಳಿಸಿದ ಎಲ್ಲಾ ಮಹಿಳೆಯರಿಗೂ ಮುಕ್ತಾಯದ ಸಮಾರಂಭದಲ್ಲಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು ಎಂದರು.

ಇದೇ ರೀತಿಯ ಉಚಿತ ತರಬೇತಿ ಶಿಬಿರವು ಮೈಸೂರಿನಲ್ಲೂ ನಡೆಯುತ್ತಿದ್ದು, ಈ ತಿಂಗಳ 8ರಂದು ಮುಕ್ತಾಯಗೊಳ್ಳಲಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಭೋವಿ ಅಭಿವೃದ್ಧಿ ನಿಗಮದವತಿಯಿಂದ ಇಂತಹ ತರಬೇತಿ ಶಿಬಿರಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ. ತರಬೇತಿ ಮುಕ್ತಾಯದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಿ ವಿಜೃಂಭಣೆಯಿಂದ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ರಾಮಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಕನಕದಾಸ್ ಸೇರಿದಂತೆ ತರಬೇತಿದಾರರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now