Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಲು ಬಿರುಸಿನ ಪೈಪೋಟಿ: ರೇಸ್‌ನಲ್ಲಿ 28ಕ್ಕೂ ಹೆಚ್ಚು ಆಕಾಂಕ್ಷಿಗಳು!

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಸಂಘಟನ್ ಸೃಜನ್ ಅಭಿಯಾನ್ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 28 ಕ್ಕೂ ಹೆಚ್ಚು ಮಂದಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಜಿಗಳನ್ನು ಸಲ್ಲಿಸಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಲಾಭಿ ಆರಂಭಗೊಂಡಿದೆ.

ಅಸ್ಸಾಂನ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ರಿಪುನ್ ಬೊಹರಾರವರು ಜಿಲ್ಲೆಗೆ ಆಗಮಿಸಿ ಆರು ತಾಲ್ಲೂಕಿನಲ್ಲಿ ಕಾರ್ಯಕರ್ತರ ಹಾಗೂ ಮುಖಂಡರುಗಳಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಕಚೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಹಾಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಜಿ.ಎಸ್.ಕುಮಾರ್‍ಗೌಡ, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಜಿ.ಎಸ್.ಮಂಜುನಾಥ್, ಡಾ.ಬಿ.ತಿಪ್ಪೇಸ್ವಾಮಿ ಜೆಜೆ ಹಟ್ಟಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಎನ್.ಡಿ.ಕುಮಾರ್, ಅಶೋಕ್‍ನಾಯ್ಡು, ಅಬ್ದುಲ್ಲಾ ಷಾವಲಿ, ಮಹಮದ್ ರಫಿ, ಪ್ರಕಾಶ್‍ರಾಮನಾಯ್ಕ, ಎಂ.ಪಿ.ಮಧುಪಾಲೆಗೌಡ, ಬಿ.ಟಿ.ಜಗದೀಶ್, ಸೈಯದ್‍ಖುದ್ದೂಸ್, ಎ.ಎಂ.ಮರುಳಾರಾಧ್ಯ, ಎನ್.ನಾಗರಾಜ್, ಆರ್.ಶಿವಣ್ಣ, ಸೈಯದ್ ಸೈಫುಲ್ಲಾ, ಜಿ.ಬಿ.ಬಾಲಕೃಷ್ಣಸ್ವಾಮಿ, ಡಾ.ಕೆ.ಅನಂತ್, ಎ.ನಾಗರಾಜ್, ಸೈಯದ್ ಅಲ್ಲಾಭಕ್ಷಿ, ಡಿ.ಎನ್.ಮೈಲಾರಪ್ಪ, ಪಿ.ಗುರುರಾಜ್, ಮೆಹಬೂಬ್ ಖಾತೂನ್, ಮುದಸಿರ್ ನವಾಜ್, ಚಾಂದ್‍ಪೀರ್ ಇವರುಗಳು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು, ತಮ್ಮ ತಮ್ಮ ಗಾಡ್‍ಫಾದರ್‍ಗಳನ್ನಿಡಿದುಕೊಂಡು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳಲೇಬೇಕೆಂದು ರಾಜಧಾನಿಯತ್ತ ಮುಖ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now