Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಕನ್ನಡ ವಿರೋಧಿ ಆದೇಶ ತಕ್ಷಣ ಹಿಂಪಡೆಯಿರಿ’ – ಶಿಕ್ಷಣ ಇಲಾಖೆಗೆ ಕರವೇ ತಾಕೀತು

---Advertisement---

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಕನ್ನಡ ಶಿಕ್ಷಕರಿಗೆ ಪ್ರತ್ಯೇಕ ಅವಕಾಶ ಕಲ್ಪಿಸದೆ, ಸಮಾಜ ವಿಜ್ಞಾನ ಶಿಕ್ಷಕರಿಂದಲೇ ಕನ್ನಡ ಬೋಧನೆಗೆ ಅವಕಾಶ ನೀಡಿರುವ ಶಿಕ್ಷಣ ಇಲಾಖೆಯ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಮಾತನಾಡಿ, ಶಿಕ್ಷಣ ಇಲಾಖೆಯ ಈ ನಿರ್ಧಾರ ಕನ್ನಡ ಭಾಷೆ ಹಾಗೂ ಕನ್ನಡ ಪದವೀಧರರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. “ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಲೆ ಕೆಟ್ಟಿದೆಯೇ? ಕನ್ನಡ ಶಿಕ್ಷಕರ ನೇಮಕಾತಿಗೆ ಅವಕಾಶವೇ ಇಲ್ಲ ಎನ್ನುವುದರ ಅರ್ಥವೇನು? ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ಸರ್ಕಾರ ತೀವ್ರ ಹೋರಾಟವನ್ನು ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಕನ್ನಡ ಐಚ್ಛಿಕ ವಿಷಯದಲ್ಲಿ ಪದವಿ, ಬಿ.ಎಡ್. ಹಾಗೂ ಟಿಇಟಿ ಸೇರಿದಂತೆ ಅಗತ್ಯ ಅರ್ಹತೆಗಳನ್ನು ಪಡೆದು ಹಲವು ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ಈ ನಿರ್ಧಾರದಿಂದ ಅರ್ಜಿ ಸಲ್ಲಿಸುವ ಅವಕಾಶವೇ ಕಳೆದುಹೋಗಿದೆ ಎಂದು ಅವರು ಹೇಳಿದರು.”ಇದು ಕೇವಲ ಉದ್ಯೋಗದ ಪ್ರಶ್ನೆಯಲ್ಲ; ಕನ್ನಡ ಭಾಷೆಯ ಅಸ್ತಿತ್ವದ ಪ್ರಶ್ನೆಯಾಗಿದೆ. ಕನ್ನಡಕ್ಕೆ ತನ್ನದೇ ಆದ ಸಾಹಿತ್ಯ, ವ್ಯಾಕರಣ, ಭಾಷಾ ವೈಜ್ಞಾನಿಕ ಹಿನ್ನೆಲೆ ಹಾಗೂ ವಿಶಿಷ್ಟ ಬೋಧನಾ ವಿಧಾನವಿದೆ. ಆದ್ದರಿಂದ ಕನ್ನಡ ವಿಷಯವನ್ನು ಕನ್ನಡದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರೇ ಬೋಧಿಸಬೇಕು. ಸಮಾಜ ವಿಜ್ಞಾನ ಶಿಕ್ಷಕರಿಗೆ ಕನ್ನಡ ಬೋಧನೆಯ ಜವಾಬ್ದಾರಿ ನೀಡುವುದು ಶಿಕ್ಷಣದ ಗುಣಮಟ್ಟಕ್ಕೂ ಧಕ್ಕೆ ತರುತ್ತದೆ” ಎಂದು ನಾರಾಯಣಗೌಡ ಅಭಿಪ್ರಾಯಪಟ್ಟರು.

ಆಕ್ಷೇಪಣೆ ಸಲ್ಲಿಸಲು ಇನ್ನೆರಡು ದಿನಗಳು ಮಾತ್ರ ಉಳಿದಿರುವುದರಿಂದ ಕನ್ನಡಪರ ಸಂಘಟನೆಗಳು, ಕನ್ನಡ ಪದವೀಧರರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಕ್ಷೇಪಣೆ ಸಲ್ಲಿಸಿ ಈ ನಿರ್ಧಾರವನ್ನು ವಿರೋಧಿಸಬೇಕು ಎಂದು ಅವರು ಕರೆ ನೀಡಿದರು.
ಸರ್ಕಾರ ಕನ್ನಡ ಶಿಕ್ಷಕರ ಹುದ್ದೆಗಳನ್ನು ಸಮಾಜ ವಿಜ್ಞಾನ ಶಿಕ್ಷಕರಿಗೆ ವರ್ಗಾಯಿಸುವ ನಿರ್ಧಾರವನ್ನು ತಕ್ಷಣವೇ ಹಿಂಪಡೆದು, ಕನ್ನಡ ವಿಷಯಕ್ಕೆ ಪ್ರತ್ಯೇಕ ಶಿಕ್ಷಕರ ನೇಮಕಾತಿ ನಡೆಸಬೇಕು. ಅರ್ಹ ಕನ್ನಡ ಪದವೀಧರರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಟಿ.ಎ. ನಾರಾಯಣಗೌಡ ಎಚ್ಚರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now