Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ : ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ

---Advertisement---

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸಾಗುವ ಸಾಧ್ಯತೆಯಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ವರುಣನ ಈ ಅಬ್ಬರದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ‘ಆರೆಂಜ್’ ಹಾಗೂ ‘ಯೆಲ್ಲೋ’ ಅಲರ್ಟ್ ಘೋಷಿಸಲಾಗಿದೆ.

ಜುಲೈ 31 ರಂದು ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಮಳೆ ಅತಿಯಾಗುವ ಮುನ್ಸೂಚನೆ ಇರುವ ಕಾರಣ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

ಇನ್ನು ಧಾರವಾಡ, ಗದಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 31 ರಂದು ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದರೆ, ಆಗಸ್ಟ್ 1 ರಂದು ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾಸನ ಹಾಗೂ ಕೊಡಗಿನ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮಳೆಯ ಜೊತೆಗೆ ಬಿರುಗಾಳಿಯ ಆರ್ಭಟವೂ ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದರೆ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ ವೇಗದ ಚಂಡಮಾರುತ ಸದೃಶ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಲಕ್ಷಣಗಳಿವೆ.

Join WhatsApp

Join Now

Join Telegram

Join Now