Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ : ಎಡಿಆರ್‌ ವರದಿ ಬಹಿರಂಗ

---Advertisement---

ದೆಹಲಿ.ಜುಲೈ.31 : ಭಾರತ ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಆಸ್ತಿ ಮೌಲ್ಯಕ್ಕೆ ಸಂಬಂಧಿಸಿದಂತೆ ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಬಹಿರಂಗಪಡಿಸಿದೆ.

ದೇಶದ ಒಟ್ಟು 31 ಮುಖ್ಯಮಂತ್ರಿಗಳು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿರುವ ಆಸ್ತಿಯನ್ನು ವಿಶ್ಲೇಷಿಸಿ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದ ಅತಿ ಹೆಚ್ಚು ಆಸ್ತಿ ಹೊಂದಿರುವ ಸಿಎಂ ಸಾಲಿನಲ್ಲಿ ಪ್ರಥಮ ಸ್ಥಾನದಲ್ಲಿದ್ದಾರೆ.

ವರದಿಯ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಒಟ್ಟು 1413 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದುವ ಮೂಲಕ ಕೋಟ್ಯಧಿಪತಿ ಸಿಎಂಗಳ ಸಾಲಿನಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಅವರ ನಂತರದ ಸ್ಥಾನಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (₹931 ಕೋಟಿ), ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ (₹648 ಕೋಟಿ) ಹಾಗೂ ಅರುಣಾಚಲ ಪ್ರದೇಶದ ಪೇಮಾ ಖಂಡು (₹332 ಕೋಟಿ) ಇದ್ದಾರೆ. ದೇಶದಲ್ಲಿರುವ 31 ಸಿಎಂಗಳ ಪೈಕಿ ನಾಲ್ವರು ಶತಕೋಟ್ಯಧಿಪತಿಗಳಾಗಿದ್ದಾರೆ.

ಮತ್ತೊಂದೆಡೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೇವಲ 55.24 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಹೊಂದುವ ಮೂಲಕ ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಸುವೇಂದು ಅಧಿಕಾರಿ (₹85.87 ಲಕ್ಷ) ಹಾಗೂ ರಾಜಸ್ಥಾನದ ಭಜನ್ ಲಾಲ್ ಶರ್ಮಾ (₹1.46 ಕೋಟಿ) ಕಡಿಮೆ ಆಸ್ತಿ ಹೊಂದಿದವರ ಪಟ್ಟಿಯಲ್ಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now