Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ತಮಟಕಲ್ಲು ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ನಗರದ ಹೊರವಲಯದ ತಮಟಕಲ್ಲು ರಸ್ತೆಯಲ್ಲಿ ಮಂಗಳವಾರ ಮುಂಜಾನೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ.

ತಮಟಕಲ್ಲು ರಸ್ತೆಯಲ್ಲಿ ನಸುಕಿನ ವೇಳೆಯಲ್ಲಿ ರಸ್ತೆ ದಾಟುವಾಗ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಮಾರ್ಗದಲ್ಲಿ ವಾಹನಗಳ ಡಿಕ್ಕಿಯಿಂದ ಕರಡಿಗಳು ಸಾವನ್ನಪ್ಪುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಇದೇ ಜಾಗದಲ್ಲಿ ಕರಡಿಯೊಂದು ವಾಹನಕ್ಕೆ ಸಿಲುಕಿ ಮೃತಪಟ್ಟಿತ್ತು. ರಸ್ತೆ ಬದಿಯಲ್ಲಿ ವನ್ಯಜೀವಿಗಳ ಓಡಾಟ ಹೆಚ್ಚಿರುವುದರಿಂದ ಅವುಗಳ ಪ್ರಾಣ ರಕ್ಷಣೆಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ವೇಗವಾಗಿ ಸಂಚರಿಸುವ ವಾಹನಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now