Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧರ್ಮಸ್ಥಳ ಅಸ್ಥಿಪಂಜರ ಪ್ರಕರಣ: ಮೂವರು ನಾಪತ್ತೆಯಾದವರ ಗುರುತು ಪತ್ತೆ

---Advertisement---

ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳದ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ನೇತ್ರಾವತಿ ಸ್ನಾನಘಟ್ಟದ ಸಮೀಪ ಪತ್ತೆಯಾಗಿದ್ದ ಏಳು ಅಸ್ಥಿಪಂಜರಗಳ ಪೈಕಿ ಮೂವರ ಗುರುತನ್ನು ವಿಧಿವಿಜ್ಞಾನ ಪ್ರಯೋಗಾಲಯ (FSL) ನಡೆಸಿದ ಡಿಎನ್‌ಎ ಪರೀಕ್ಷೆ ಅಧಿಕೃತವಾಗಿ ದೃಢಪಡಿಸಿದೆ.ವಿಶೇಷ ತನಿಖಾ ದಳ (SIT) ನಡೆಸಿದ ಸುದೀರ್ಘ ತನಿಖೆ ಹಾಗೂ ವೈಜ್ಞಾನಿಕ ಪರೀಕ್ಷೆಯ ಫಲವಾಗಿ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಮೂವರು ವ್ಯಕ್ತಿಗಳ ಗುರುತು ಈಗ ಖಚಿತವಾಗಿದೆ. ಈ ಬೆಳವಣಿಗೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಸೌಜನ್ಯಳ ಮಾವ ವಿಠಲ ಗೌಡ ನೀಡಿದ ಮಾಹಿತಿಯ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದ ಬಂಗ್ಲೆಗುಡ್ಡೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಕಳೆದ ಸೆಪ್ಟೆಂಬರ್ 17 ಮತ್ತು 18ರಂದು ನಡೆದ ಕಾರ್ಯಾಚರಣೆಯಲ್ಲಿ ಒಟ್ಟು ಏಳು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಪ್ರಕರಣ ರಾಜ್ಯದ ಗಮನ ಸೆಳೆದಿತ್ತು.ಸ್ಥಳದಲ್ಲೇ ಕೆಲವು ಗುರುತಿನ ಚೀಟಿಗಳು (ID Cards) ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ನಾಪತ್ತೆಯಾದವರ ಕುಟುಂಬಗಳನ್ನು ಪತ್ತೆಹಚ್ಚಿ, ನ್ಯಾಯಾಲಯದ ಅನುಮತಿ ಪಡೆದು ಅವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಡಿಎನ್‌ಎ ಪರೀಕ್ಷೆಗೆ ಬೆಂಗಳೂರಿನ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದರು. ಇದೀಗ ಬಂದಿರುವ ವರದಿಯಲ್ಲಿ ಮೂರು ಕುಟುಂಬಗಳ ಡಿಎನ್‌ಎ ಮಾದರಿಗಳು ಅಸ್ಥಿಪಂಜರಗಳೊಂದಿಗೆ ಹೊಂದಾಣಿಕೆಯಾಗಿರುವುದು ದೃಢಪಟ್ಟಿದೆ.

ಡಿಎನ್‌ಎ ಮೂಲಕ ಗುರುತು ಪತ್ತೆಯಾದವರು
ಎಫ್‌ಎಸ್‌ಎಲ್ ವರದಿಯ ಪ್ರಕಾರ ಗುರುತು ದೃಢಪಟ್ಟಿರುವವರು:
ಯು.ಬಿ. ಅಯ್ಯಪ್ಪ (70) – ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿ.
ಆದಿಶೇಷ ನಾರಾಯಣ (27) – ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ಗ್ರಾಮದ ನಿವಾಸಿ.
ಕೃಷ್ಣಪ್ಪ (85) – ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ನಿವಾಸಿ.

ಯು.ಬಿ. ಅಯ್ಯಪ್ಪ ಅವರು 2017ರ ಜೂನ್ 25ರಂದು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದರು. ಈ ಸಂಬಂಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆದಿಶೇಷ ನಾರಾಯಣ ಬೆಂಗಳೂರಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದು, 2013ರ ಅಕ್ಟೋಬರ್ 2ರಂದು ಮನೆಗೆ ಬಂದ ಬಳಿಕ ಏಕಾಏಕಿ ನಾಪತ್ತೆಯಾಗಿದ್ದರು. ಈ ಹಿಂದೆ ಕೂಡ ಹಲವು ಬಾರಿ ಮನೆ ಬಿಟ್ಟು ಹೋಗಿ ಮರಳುತ್ತಿದ್ದ ಕಾರಣ ಕುಟುಂಬಸ್ಥರು ಪೊಲೀಸ್ ದೂರು ದಾಖಲಿಸಿರಲಿಲ್ಲ.ಕೃಷ್ಣಪ್ಪ ಅವರು ಕಳೆದ ಅಕ್ಟೋಬರ್‌ನಲ್ಲಿ ಮನೆಯಿಂದ ಹೊರಹೋಗಿ ನಾಪತ್ತೆಯಾಗಿದ್ದರು. ನಂತರ ಕುಟುಂಬಸ್ಥರು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಎಸ್‌ಐಟಿ ಅಧಿಕಾರಿಗಳು ಜುಲೈ 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಕರಣದ ಅಂತಿಮ ವರದಿ ಸಲ್ಲಿಸಿದ್ದು, ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢಪಟ್ಟಿರುವುದನ್ನು ವರದಿಯಲ್ಲಿ ಉಲ್ಲೇಖಿಸಿದ್ದಾರೆ.ಕಾನೂನು ಪ್ರಕ್ರಿಯೆಯಂತೆ, ಗುರುತು ಪತ್ತೆಯಾದ ಕುಟುಂಬಗಳು ಎಸ್‌ಐಟಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ತಮ್ಮ ಸಂಬಂಧಿಕರ ಅಸ್ಥಿಪಂಜರ ಅಥವಾ ಚಿತಾಭಸ್ಮವನ್ನು ಪಡೆದುಕೊಳ್ಳಬಹುದಾಗಿದೆ.ಇನ್ನೂ ಗುರುತು ಪತ್ತೆಯಾಗದ ನಾಲ್ಕು ಅಸ್ಥಿಪಂಜರಗಳ ಕುರಿತು ತನಿಖೆ ಮುಂದುವರಿದಿದ್ದು, ಎಸ್‌ಐಟಿ ವೈಜ್ಞಾನಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆಯನ್ನು ಚುರುಕುಗೊಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ