ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ಚಿತ್ರದುರ್ಗ ಜಿಲ್ಲೆಯಲ್ಲಿ ಎಐಸಿಸಿ ವತಿಯಿಂದ ನಡೆಯುತ್ತಿದ್ದ ಸಂಘಟನಾ ಸೃಜನ್ ಅಭಿಯಾನದ ಸಭೆಗಳಲ್ಲಿ ಶಿಸ್ತುಬದ್ಧವಾಗಿ ನಡೆದುಕೊಳ್ಳದೆ, ಗೊಂದಲ ಹಾಗೂ ಗಲಾಟೆ ಸೃಷ್ಟಿಸಿದ ಆರೋಪದ ಮೇಲೆ ಮೂವರು ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
ಸಭೆಯಲ್ಲಿ ಎಐಸಿಸಿ ಮತ್ತು ಕೆಪಿಸಿಸಿ ವೀಕ್ಷಕರಿಗೆ ಸಭೆ ನಡೆಸಲು ಅಡ್ಡಿಪಡಿಸಿ, ಒರಟು ಧಾಟಿಯಲ್ಲಿ ಪ್ರಶ್ನೆ ಮಾಡುವ ಮೂಲಕ ವೀಕ್ಷಕರಿಗೆ ಮುಜುಗರ ಉಂಟುಮಾಡಿದ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ಗೊಂದಲ ಸೃಷ್ಟಿಸಿದ ಚಿತ್ರದುರ್ಗ DCC ಪ್ರಧಾನ ಕಾರ್ಯದರ್ಶಿ ಬಿ.ಟಿ. ಜಗದೀಶ್, ಚಿತ್ರದುರ್ಗ DCC ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿ ಗೌಡ ಹಾಗೂ ಪ್ರೊಫೆಷನಲ್ ಸೆಲ್ ಉಪಾಧ್ಯಕ್ಷ ಗುರುರಾಜ್ ಶೆಟ್ಟಿ ಅವರಿಗೆ ಕೆಪಿಸಿಸಿ ಶೋಕಾಸ್ ನೋಟಿಸ್ ನೀಡಿದೆ.
ನೋಟಿಸ್ ತಲುಪಿದ ಒಂದು ವಾರದೊಳಗೆ ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿಗೆ ಲಿಖಿತ ಸಮಜಾಯಿಷಿ ನೀಡಬೇಕು. ನಿಗದಿತ ಸಮಯದಲ್ಲಿ ಸೂಕ್ತ ವಿವರಣೆ ಬರದಿದ್ದರೆ ಪಕ್ಷವು ಮುಂದಿನ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಎಚ್ಚರಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








