Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶ ಇಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

---Advertisement---

ಬೆಂಗಳೂರು.ಆಗಸ್ಟ್.1: ನಾಳೆ ನಡೆಯಲಿರುವ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಬರುವ ಅಭ್ಯರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಗೊಂದಲ ಅಥವಾ ಅನಗತ್ಯ ವಿವಾದಗಳಿಗೆ ಆಸ್ಪದ ನೀಡಬಾರದು ಎಂಬ ಮುನ್ನೆಚ್ಚರಿಕೆಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪರೀಕ್ಷಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಸಾಂಪ್ರದಾಯಿಕ ಹಾಗೂ ಧಾರ್ಮಿಕ ಚಿಹ್ನೆಗಳಾದ ಜನಿವಾರ, ಮಾಂಗಲ್ಯ ಸರ, ಉಂಗುರ, ಕೈ ಕಡಗ ಮತ್ತು ಕುಂಕುಮ ಧಾರಣೆಗೆ ಯಾವುದೇ ಅಭ್ಯಂತರವಿಲ್ಲ. ಆದರೆ ಹಿಜಾಬ್ ಧರಿಸುವುದಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ಕುರಿತು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲಗಳಿರಬಾರದು ಎಂಬ ಉದ್ದೇಶದಿಂದ ಮುಂಚಿತವಾಗಿಯೇ ಮಾಹಿತಿ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಇದೇ ವೇಳೆ ಪರೀಕ್ಷೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಹರಡುವವರ ಹಾಗೂ ಸಾಮಾಜಿಕ ಜಾಲತಾಣಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸುವಂತೆ ಇಲಾಖಾ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now