ಗ್ಲಾಸ್ಗೋ, ಆಗಸ್ಟ್ 01: ಇಲ್ಲಿ ಶುಕ್ರವಾರ ನಡೆದ 2026ರ ಕಾಮನ್ವೆಲ್ತ್ ಗೇಮ್ಸ್ನ ಪುರುಷರ ಜಾವೆಲಿನ್ ತ್ರೋ ಸ್ಪರ್ಧೆಯಲ್ಲಿ ಭಾರತ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಟೋಕಿಯೋ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದರೆ, ಯುವ ಅಥ್ಲೀಟ್ ಯಶ್ವೀರ್ ಸಿಂಗ್ ಅದ್ಭುತ ಪ್ರದರ್ಶನದೊಂದಿಗೆ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಜಾವೆಲಿನ್ ತ್ರೋನಲ್ಲಿ ಭಾರತ ಒಟ್ಟಿಗೆ ಎರಡು ಪದಕಗಳನ್ನು ತನ್ನದಾಗಿಸಿಕೊಂಡು ಹೊಸ ಇತಿಹಾಸ ಬರೆದಿದೆ.
ಅದ್ಭುತ ಪ್ರದರ್ಶನ ನೀಡಿದ ನೀರಜ್ ಚೋಪ್ರಾ, ತಮ್ಮ ಎರಡನೇ ಯತ್ನದಲ್ಲಿ 85.83 ಮೀಟರ್ ದೂರ ಎಸೆಯುವ ಮೂಲಕ ಈ ಋತುವಿನ ಅತ್ಯುತ್ತಮ (Season Best) ಸಾಧನೆಯೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಕಳೆದ ಜೂನ್ನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ನಲ್ಲಿ ಅವರು ಬರೆದಿದ್ದ 85.69 ಮೀಟರ್ಗಳ ದಾಖಲೆಯನ್ನು ನೀರಜ್ ಈ ವೇಳೆ ಮುರಿದರು.
ಮತ್ತೊಂದೆಡೆ, ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಾರ್ಪಣೆ ಮಾಡಿದ 24 ವರ್ಷದ ಯಶ್ವೀರ್ ಸಿಂಗ್, ತಮ್ಮ ಆರನೇ ಹಾಗೂ ಕೊನೆಯ ಯತ್ನದಲ್ಲಿ 85.41 ಮೀಟರ್ ದೂರ ಜಾವೆಲಿನ್ ಎಸೆದು ವೈಯಕ್ತಿಕ ಸಾರ್ವಕಾಲಿಕ ಅತ್ಯುತ್ತಮ (Personal Best) ಪ್ರದರ್ಶನದೊಂದಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದರು.
ಶ್ರೀಲಂಕಾದ ರುಮೇಶ್ ತರಂಗ ಪತಿರಾಗೆ ತಮ್ಮ ಎರಡನೇ ಯತ್ನದಲ್ಲಿ 89.75 ಮೀಟರ್ ದೂರ ಎಸೆಯುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ವಿಪರೀತ ಚಳಿ ಮತ್ತು ಬಿರುಗಾಳಿಯ ನಡುವೆಯೂ ಅವರು 90 ಮೀಟರ್ ಗಡಿಯ ಹತ್ತಿರ ತಲುಪಿದ್ದು ವಿಶೇಷವಾಗಿತ್ತು.
ಈ ಸ್ಪರ್ಧೆಯಲ್ಲಿದ್ದ ಭಾರತದ ಮತ್ತೊಬ್ಬ ಸ್ಪರ್ಧಿ ರೋಹಿತ್ ಯಾದವ್ 81.56 ಮೀಟರ್ ದೂರ ಎಸೆದು 7ನೇ ಸ್ಥಾನ ಪಡೆದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











