ಗ್ಲಾಸ್ಗೋ ಆಗಸ್ಟ್ 1: ಪ್ರಸ್ತುತ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2026ರ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಭಾರತದ ಪ್ರೀತಿ ಪವಾರ್ ಭರ್ಜರಿ ಸಾಧನೆ ಮಾಡಿದ್ದು, ಮಹಿಳೆಯರ 54 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಶನಿವಾರ (ಆಗಸ್ಟ್ 1) ನಡೆದ ರೋಚಕ ಫೈನಲ್ ಹಣಾಹಣಿಯಲ್ಲಿ ಕೆನಡಾದ ಸ್ಕಾರ್ಲೆಟ್ ಸವನ್ನಾ ಡೆಲ್ಗಾಡೊ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರೀತಿ, ಎದುರಾಳಿಯನ್ನು ಮಣಿಸಿ ಭಾರತಕ್ಕೆ ಸ್ವರ್ಣ ಪದಕ ತಂದುಕೊಟ್ಟಿದ್ದಾರೆ. ರಿಂಗ್ನಲ್ಲಿ ಆರಂಭದಿಂದಲೇ ಪೂರ್ಣ ಮೇಲುಗೈ ಸಾಧಿಸಿದ ಅವರು, ರಿಂಗ್ನ ಚುರುಕಿನ ಚಲನೆ ಹಾಗೂ ತೀಕ್ಷ್ಣವಾದ ಪಂಚ್ಗಳ ಮೂಲಕ ಕೆನಡಾದ ಬಾಕ್ಸರ್ ವಿರುದ್ಧ ಭರ್ಜರಿ ಜಯ ದಾಖಲಿಸಿದರು.
Indian boxer Preeti Pawar wins women's 54kg medal gold medal in Commonwealth Games pic.twitter.com/bxB1kNsLes
— Press Trust of India (@PTI_News) August 1, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











