ಬೆಂಗಳೂರು.ಆಗಸ್ಟ್.2: ರಾಜ್ಯ ಪೊಲೀಸ್ ಇಲಾಖೆಯ 3,991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಇಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆಯೋಜಿಸಿರುವ ಈ ಪರೀಕ್ಷೆಗೆ ಸುಮಾರು 4.54 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಬರೋಬ್ಬರಿ 800ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
ಪರೀಕ್ಷೆ ಪೂರ್ಣಗೊಂಡ ಕೇವಲ ಅರ್ಧ ಗಂಟೆಯೊಳಗೆ (30 ನಿಮಿಷ) ಅಭ್ಯರ್ಥಿಗಳ OMR ಶೀಟ್ಗಳನ್ನು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ಗೆ ಅಪ್ಲೋಡ್ ಮಾಡಲಾಗುವುದು. ಪ್ರತಿಯೊಬ್ಬರ ನೋಂದಣಿ ಸಂಖ್ಯೆ ಸೇರಿದಂತೆ ಸಮಗ್ರ ವಿವರಗಳು ಸಾರ್ವಜನಿಕವಾಗಿ ಲಭ್ಯವಾಗಲಿದ್ದು, ಉತ್ತರ ಪತ್ರಿಕೆ ತಿದ್ದುವ ಅಥವಾ ಅಕ್ರಮ ಎಸಗುವ ಸಾಧ್ಯತೆಯನ್ನು ಸಂಪೂರ್ಣವಾಗಿ ಮೆಟ್ಟಿಹಾಕಲಾಗಿದೆ.
ಪರೀಕ್ಷಾ ಶೈಲಿಯಲ್ಲಿಯೂ ಪ್ರಮುಖ ಬದಲಾವಣೆ ತರಲಾಗಿದ್ದು, ಪ್ರಶ್ನೆಗಳಿಗೆ ಉತ್ತರ ಗೊತ್ತಿಲ್ಲವೆಂದು ಖಾಲಿ ಬಿಡುವಂತಿಲ್ಲ. ಪ್ರತಿ ಪ್ರಶ್ನೆಗೂ 5ನೇ ಆಯ್ಕೆಯನ್ನು ನೀಡಲಾಗಿದ್ದು, ಉತ್ತರ ತಿಳಿಯದಿದ್ದಲ್ಲಿ ಅದನ್ನು ಕಡ್ಡಾಯವಾಗಿ ಶೇಡ್ ಮಾಡಬೇಕು. ಒಂದು ವೇಳೆ ಯಾವುದೇ ಕಾಲಂ ಗುರುತಿಸದೆ ಖಾಲಿ ಬಿಟ್ಟರೆ, 1/4 (ಕಾಲು ಭಾಗ) ಅಂಕಗಳನ್ನು ದಂಡದ ರೂಪದಲ್ಲಿ ಕಡಿತಗೊಳಿಸಲಾಗುತ್ತದೆ.
ಪರೀಕ್ಷೆಯ ಪಾರದರ್ಶಕತೆಗಾಗಿ ಪ್ರಶ್ನೆಪತ್ರಿಕೆಗಳ ಸೀಲ್ ಅನ್ನು ಕೇಂದ್ರದ ಪ್ರಾಂಶುಪಾಲರು ಹಾಗೂ ಐವರು ಅಭ್ಯರ್ಥಿಗಳ ಸಮ್ಮುಖದಲ್ಲೇ ತೆರೆಯಲಾಗುತ್ತದೆ. ಪ್ರತಿಯೊಂದು ಕೊಠಡಿಯಲ್ಲಿಯೂ ಹೈ ಡೆಫಿನಿಷನ್ ಕ್ಯಾಮೆರಾ, ಲೈವ್ ವೆಬ್ಕಾಸ್ಟಿಂಗ್, ನೆಟ್ವರ್ಕ್ ಜಾಮರ್, ಬೆರಳಚ್ಚು बायोಮೆಟ್ರಿಕ್ ಹಾಗೂ ಮುಖಗುರುತು ಪತ್ತೆ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಅಕ್ರಮಕ್ಕೆ ಯತ್ನಿಸುವ ಅಭ್ಯರ್ಥಿಗಳನ್ನು ಶಾಶ್ವತವಾಗಿ ಡಿಬಾರ್ ಮಾಡಲಾಗುವುದು ಎಂದು ಪ್ರಾಧಿಕಾರ ಎಚ್ಚರಿಸಿದೆ.
ಅಭ್ಯರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲು ಪರೀಕ್ಷೆ ಆರಂಭಕ್ಕೂ 1 ಗಂಟೆ ಮುಂಚಿತವಾಗಿ ಆಗಮಿಸಲು ಸೂಚಿಸಲಾಗಿದೆ. ನಕಲು ತಡೆಯಲು ಅನಗತ್ಯ ವಸ್ತುಗಳ ತಡೆಗೆ ಕಟ್ಟುನಿಟ್ಟಿನ ನಿಯಮ ರೂಪಿಸಲಾಗಿದ್ದರೂ, ಧಾರ್ಮಿಕ ನಂಬಿಕೆಗಳಿಗೆ ಗೌರವ ನೀಡಿ ಶಿವದಾರ, ಜನಿವಾರ, ಮಾಂಗಲ್ಯಸರ ಮುಂತಾದವುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











