Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಗ್ನಿವೀರ್ ನೇಮಕಾತಿ : ಯುಹೆಚ್‌ಕ್ಯೂ ಕೋಟಾದಡಿ ಅರ್ಜಿ ಆಹ್ವಾನ

Agniveer
---Advertisement---

ಬೆಂಗಳೂರು.ಆಗಸ್ಟ್.2:  ಸಿಗ್ನಲ್ ರೆಜಿಮೆಂಟ್‌ನಲ್ಲಿ ಯು.ಹೆಚ್.ಕ್ಯೂ. (UHQ) ಕೋಟಾದಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಅಗ್ನಿಪಥ್ ಯೋಜನೆಯ ಮೂಲಕ ವಿವಿಧ ಅಗ್ನಿವೀರ್ ಹುದ್ದೆಗಳ ನೇಮಕಾತಿಗಾಗಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ನೇಮಕಾತಿ ಪ್ರಕ್ರಿಯೆಯು ಆಗಸ್ಟ್ 18 ರಿಂದ ಆಗಸ್ಟ್ 21 ರವರೆಗೆ ನಡೆಯಲಿದೆ. ವೀರನಾರಿಯರು, ಮಾಜಿ ಸೈನಿಕರ ಮಕ್ಕಳು ಹಾಗೂ ಪ್ರಸ್ತುತ ಸೇವೆಯಲ್ಲಿರುವ ಸೈನಿಕರ ಸ್ವಂತ ಸಹೋದರರು (ತಮ್ಮಂದಿರು) ಈ ಕೋಟಾದಡಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ನೇಮಕಾತಿ ಪ್ರಕ್ರಿಯೆಯ ಪ್ರಮುಖ ವಿವರಗಳು:

ವಯೋಮಿತಿ: 17 ವರ್ಷ 6 ತಿಂಗಳಿಂದ 22 ವರ್ಷದೊಳಗಿನವರು.

ಲಭ್ಯವಿರುವ ಹುದ್ದೆಗಳು:

ಅಗ್ನಿವೀರ್ ಜನರಲ್ ಡ್ಯೂಟಿ (General Duty)

ಅಗ್ನಿವೀರ್ ಟೆಕ್ನಿಕಲ್ (Technical)

ಅಗ್ನಿವೀರ್ ಟ್ರೇಡ್ಸ್‌ಮನ್ (Tradesman)

ದಿನಾಂಕ ಮತ್ತು ಸ್ಥಳ:

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 18 ರಂದು ಬೆಳಿಗ್ಗೆ 5:00 ಗಂಟೆಗೆ ಮಧ್ಯಪ್ರದೇಶದ ಜಬಲ್ಪುರ್‌ನಲ್ಲಿರುವ ಬಾಯ್ಸ್ ಸ್ಪೋರ್ಟ್ಸ್ ಕಂಪನಿ ಮೈದಾನದಲ್ಲಿ (ಜಬಲ್ಪುರ್ ರಸ್ತೆ) ಹಾಜರಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ ಸಂಖ್ಯೆ: 04027-863016

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now