ಮೈಸೂರು.ಆಗಸ್ಟ್.2: ಕುರ್ ಕುರೆ ಪ್ಯಾಕೆಟ್‌ನೊಳಗಿದ್ದ ಸಣ್ಣ ಪ್ಲಾಸ್ಟಿಕ್ ಬಾಲೊಂದು ಐದು ವರ್ಷದ ಮಗುವಿನ ಪ್ರಾಣವನ್ನೇ ಬಲಿ ಪಡೆದಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ವರದಿಯಾಗಿದೆ.
ಗೌರಿಪುರ ನಿವಾಸಿಗಳಾದ ಸಂತೋಷ್ ಹಾಗೂ ಐಶ್ವರ್ಯಾ ದಂಪತಿಯ ಐದು ವರ್ಷದ ಪುತ್ರ ಮುಕುಂದ್ ಮಯೂರ್ ಈ ದುರಂತದಲ್ಲಿ ಕೊನೆಯುಸಿರೆಳೆದ ದುರ್ದೈವಿ.
ಮಾಹಿತಿಯ ಪ್ರಕಾರ, ಮಗು ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಆಟಿಕೆ ಪ್ಲಾಸ್ಟಿಕ್ ಚೆಂಡನ್ನು ಆಟವಾಡುತ್ತಾ ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ಅದು ತಕ್ಷಣವೇ ಬಾಲಕನ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಇದರಿಂದಾಗಿ ಮಗುಉಸಿರುಗಟ್ಟಿ ಕೊನೆಯುಸಿರೆಳೆದಿದೆ. ಈ ದುರಂತ ಘಟನೆಗೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









