Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಮುಂದಿನ 7 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಬೆಂಗಳೂರು.ಆಗಸ್ಟ್.3: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಒಂದು ವಾರ ಕಾಲ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದ್ದು, ಅಪಾರ ಪ್ರಮಾಣದ ಮಳೆ ಸುರಿಯುವ ಸಾಧ್ಯತೆಯಿದೆ.

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜಲಪ್ರಳಯದಂತಹ ವಾತಾವರಣ ಸೃಷ್ಟಿಯಾಗುವ ಲಕ್ಷಣಗಳಿರುವುದರಿಂದ ಈ ಭಾಗಗಳಿಗೆ ಅತ್ಯಂತ ಹೆಚ್ಚಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಅದೇ ರೀತಿ ಉಡುಪಿ, ಉತ್ತರ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಮುನ್ನೆಚ್ಚರಿಕೆಯಾಗಿ ‘ಆರೆಂಜ್ ಅಲರ್ಟ್’ ಜಾರಿಯಲ್ಲಿದೆ.

ಬೆಳಗಾವಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭಾಗಗಳಲ್ಲಿ ಆಗಸ್ಟ್ 8ರವರೆಗೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಮುಂದುವರಿಯಲಿದೆ. ಇತ್ತ ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಧಾರವಾಡ, ಗದಗ ಹಾಗೂ ರಾಯಚೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 3ರಂದು ಹಗುರ ಮಳೆಯಾಗಲಿದ್ದು, ಆಗಸ್ಟ್ 4ರಿಂದ 8ರ ಅವಧಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now