ಬೆಂಗಳೂರು.ಆಗಸ್ಟ್.03 ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2 ರಂದು ರಾಜ್ಯಾದ್ಯಂತ ನಡೆಸಲಾದ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಎದ್ದಿರುವ ಗೊಂದಲಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕೃತ ಸ್ಪಷ್ಟನೆ ನೀಡಿದೆ.
ಪರೀಕ್ಷೆಯ ಸಮಯದಲ್ಲಿ ವಿತರಿಸಲಾದ ಒಎಂಆರ್ ಶೀಟ್ ಹಾಗೂ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಗಳು ಒಂದೇ ಆಗಿಲ್ಲ ಎಂಬ ಕಾರಣಕ್ಕೆ ಅಭ್ಯರ್ಥಿಗಳಲ್ಲಿ ಗೊಂದಲ ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಪ್ರಾಧಿಕಾರ ತಿಳಿಸಿದೆ.
ಯಾವುದೇ ನಿಯಮವಿಲ್ಲ: ಒಎಂಆರ್ ಶೀಟ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆ ಒಂದೇ ಇರಬೇಕು ಎಂದು ಪ್ರಾಧಿಕಾರವು ತನ್ನ ಯಾವುದೇ ಪ್ರಕಟಣೆ, ಸೂಚನೆ ಅಥವಾ ಮಾಧ್ಯಮಗಳ ಮೂಲಕ ಎಲ್ಲೂ ತಿಳಿಸಿಲ್ಲ.
ಸಾಮಾನ್ಯ ಪ್ರಕ್ರಿಯೆ: ಒಎಂಆರ್ ಉತ್ತರ ಪತ್ರಿಕೆಯಲ್ಲಿ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆ ಹಾಗೂ ಆವೃತ್ತಿ ಕೋಡ್ ಅನ್ನು ಬರೆಯಲು/ತುಂಬಲು ಅವಕಾಶ ನೀಡಲಾಗಿರುತ್ತದೆ. ಒಂದು ವೇಳೆ ಎರಡೂ ಸಂಖ್ಯೆಗಳೂ ಒಂದೇ ಆಗಿರಬೇಕಿದ್ದಲ್ಲಿ, ಒಎಂಆರ್‌ನಲ್ಲಿ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಯನ್ನು ಬರೆಯುವ ಅಗತ್ಯವೇ ಇರುತ್ತಿರಲಿಲ್ಲ.
ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗಿದ್ದು, ಅಭ್ಯರ್ಥಿಗಳನ್ನು ತಪ್ಪುದಾರಿಗೆ ಎಳೆಯಲು ಕೆಲವರು ಸಾಮಾಜಿಕ ಮಾಧ್ಯಮಗಳ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ.
ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಇಂತಹ ಅನಗತ್ಯ ಮತ್ತು ಆಧಾರರಹಿತ ಸುಳ್ಳು ಸುದ್ದಿಗಳನ್ನು ನಂಬಬಾರದು ಹಾಗೂ ಹರಡಬಾರದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











