Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆಯಿಂದ ಆ. 6 ರವರೆಗೆ ಎಂ.ಕೆ. ಹಟ್ಟಿಯಲ್ಲಿ ಜವಳಿ ಶಾಂತಕುಮಾರ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

---Advertisement---

ಸುದ್ದಿಒನ್, ಚಿತ್ರದುರ್ಗ, ಆ.03 :  ದೃಶ್ಯ ಕಲಾವಿದ ಜವಳಿ ಶಾಂತಕುಮಾರ ಇವರ  ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಆ. 4 ಮತ್ತು 6ರವರೆಗೆ ನಗರದ ಎಂ.ಕೆ. ಹಟ್ಟಿಯ ಎಸ್.ಜೆ.ಎಂ. ರೆಸಿಡೆನ್ಸಿಯಲ್ (ಸಿಬಿಎಸ್‍ಇ) ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಧನ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ.

ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಎಸ್.ಜೆ.ಎಂ. ವಿದ್ಯಾ ಪೀಠ (ರಿ.)ದ ಆಡಳಿತ ಮಂಡಳಿ,ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ಆ. 4ರ ಬೆಳಿಗ್ಗೆ 11ಕ್ಕೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಸ್.ಜೆ.ಎಂ ರೆಸಿಡೆನ್ಸಿಯಲ್ (ಸಿಬಿಎಸ್‍ಇ) ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಗಾಯತ್ರಿ ಬಿ.ಆರ್ ವಹಿಸಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುನಾಥ್ ಬಿ.ಎಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ, ಶ್ರೀಮತಿ ಪಲ್ಲವಿ ಹೆಚ್.ವಿ ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪವಲ್ಲಿ ಎನ್.ಎಂ ಎಸ್.ಜೆ.ಎಂ. ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ತಿಪ್ಪೇಸ್ವಾಮಿ ಎನ್.ಬಿ. ಕರ್ನಾಟಕ ಲಲಿತಕಲಾ ಅಕಾಡೆಮಿಯ  ಸದಸ್ಯರಾದ ಕಣೇಶ್. ಸಿ ಚಿತ್ರ ಕಲಾವಿದರಾದ ನಾಗರಾಜ ಬೇದ್ರೆ ಭಾಗವಹಿಸಲಿದ್ದಾರೆ.
ಆ. 4 ರಿಂದ 6ರವರೆಗೆ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ  ದೃಶ್ಯ ಕಲಾವಿದ ಜವಳಿ ಶಾಂತಕುಮಾರ ಇವರ  ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now