ಬೆಂಗಳೂರು. ಆಗಸ್ಟ್.3: ಕರ್ನಾಟಕ ಅರಣ್ಯ ಇಲಾಖೆಯ ಚಾಮರಾಜನಗರ ವೃತ್ತದಲ್ಲಿ ಖಾಲಿ ಇರುವ 159 ಅರಣ್ಯ ವೀಕ್ಷಕ (ಗ್ರೂಪ್ ‘ಡಿ’) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಆಯ್ಕೆ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ ಮತ್ತು ಹಂಚಿಕೆ:
ಒಟ್ಟು 159 ಖಾಲಿ ಹುದ್ದೆಗಳ ಪೈಕಿ ಶೇಕಡ 50 ರಷ್ಟು ಹುದ್ದೆಗಳನ್ನು ಸ್ಥಳೀಯ ಅರಣ್ಯ ಬುಡಕಟ್ಟು ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ. ವಿಭಾಗವಾರು ವಿವರ ಹೀಗಿದೆ:
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಂಡೀಪುರ: 91 ಹುದ್ದೆಗಳು
ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶ, ಚಾಮರಾಜನಗರ: 26 ಹುದ್ದೆಗಳು
ಮಲೈ ಮಹದೇಶ್ವರ ವನ್ಯಜೀವಿ ವಿಭಾಗ, ಕೊಳ್ಳೇಗಾಲ: 24 ಹುದ್ದೆಗಳು
ಕಾವೇರಿ ವನ್ಯಜೀವಿ ವಿಭಾಗ, ಕೊಳ್ಳೇಗಾಲ: 18 ಹುದ್ದೆಗಳು
ವೇತನ ಶ್ರೇಣಿ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 29,600 – 52,800 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಎಸ್ಎಲ್ಸಿ (SSLC) ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. ಸರ್ಕಾರದ ವಿಶೇಷ ಆದೇಶದಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಏಕಕಾಲಿಕ ಸಡಿಲಿಕೆ ನೀಡಲಾಗಿದ್ದು, ವಯೋಮಿತಿ ವಿವರ ಹೀಗಿದೆ:
ಸಾಮಾನ್ಯ ವರ್ಗ: ಗರಿಷ್ಠ 30 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ: ಗರಿಷ್ಠ 32 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1: ಗರಿಷ್ಠ 33 ವರ್ಷ
(ಮಾಜಿ ಸೈನಿಕರು ಹಾಗೂ ಅರಣ್ಯ ಪ್ರೇರಕರಿಗೆ ನಿಯಮಾವಳಿಯಂತೆ ಹೆಚ್ಚುವರಿ ವಯೋಮಿತಿ ಸಡಿಲಿಕೆ ಇರಲಿದೆ).
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01 ಆಗಸ್ಟ್ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್ 2026 (ರಾತ್ರಿ 11:59 ರವರೆಗೆ)
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 02 ಸೆಪ್ಟೆಂಬರ್ 2026

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಪುರುಷ ಅಭ್ಯರ್ಥಿಗಳಿಗೆ: ರೂ. 200/-
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಮಹಿಳಾ/ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: ರೂ. 100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಪುರುಷ ಅಭ್ಯರ್ಥಿಗಳಿಗೆ: ರೂ. 100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಮಹಿಳಾ/ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: ರೂ. 50/-
(ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ).

ಆಯ್ಕೆ ಪ್ರಕ್ರಿಯೆ:
ಎಸ್ಎಸ್ಎಲ್ಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:20 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಶಾರೀರಿಕ ಮಾನದಂಡಗಳ ಪರೀಕ್ಷೆ (PST), ದೈಹಿಕ ತಾಳ್ವಿಕೆ ಪರೀಕ್ಷೆ (PET) ಹಾಗೂ ದೈಹಿಕ ಸಮರ್ಥತೆ ಪರೀಕ್ಷೆಗೆ (PET) ಕರೆಯಲಾಗುತ್ತದೆ. ಇವುಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಮೆರಿಟ್ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಅರಣ್ಯ ಇಲಾಖೆಯ ಅಧಿಕೃತ ಜಾಲತಾಣ https://aranya.gov.in/ ಮೂಲಕ ಮಾತ್ರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಇತರೆ ಯಾವುದೇ ಮಾರ್ಗದಲ್ಲಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















