Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ: ‘ಹ್ಯಾಟ್ರಿಕ್ ಶಾಸಕ’ನಿಗೆ ಒಲಿದ ಮಂತ್ರಿಗಿರಿ

---Advertisement---

ಸುದ್ದಿಒನ್, ಬೆಂಗಳೂರು, ಆಗಸ್ಟ್. 03 : ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಇಂದು ನೂತನ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಲೋಕ ಭವನದಲ್ಲಿಂದು ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ನೂತನ ಸಚಿವ ಟಿ. ರಘುಮೂರ್ತಿ ಅವರಿಗೆ ಪ್ರಮಾಣವಚನ ಬೋಧಿಸಿದರು. ‘ಹ್ಯಾಟ್ರಿಕ್ ಶಾಸಕ’ ಎಂದೇ ಖ್ಯಾತಿ ಪಡೆದಿರುವ ಟಿ ರಘುಮೂರ್ತಿ ಅವರು ಇದೇ ಮೊದಲ ಬಾರಿಗೆ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಿದ್ದಾರೆ. ಮೂಲತಃ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಡಬನಕಟ್ಟೆ ಗ್ರಾಮದವರಾದ ರಘುಮೂರ್ತಿ ಅವರು ಸಿವಿಲ್ ಎಂಜಿನಿಯರಿಂಗ್ ಪದವೀಧರರಾಗಿದ್ದು, ರಾಜಕೀಯಕ್ಕೆ ಬರುವ ಮುನ್ನ ಭೂಸೇನಾ ನಿಗಮದಲ್ಲಿ ಕಾರ್ಯಪಾಲಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಬಳಿಕ ತಮ್ಮ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ ಸಕ್ರಿಯ ರಾಜಕಾರಣಕ್ಕೆ ಧುಮುಕಿದ ಅವರು, 2013, 2018 ಮತ್ತು 2023ರ ವಿಧಾನಸಭಾ ಚುನಾವಣೆಗಳಲ್ಲಿ ಸತತವಾಗಿ ಮೂರು ಬಾರಿ ಗೆಲುವು ಸಾಧಿಸುವ ಮೂಲಕ ಚಳ್ಳಕೆರೆ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಈ ಹಿಂದೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ (KSSIDC) ಮತ್ತು ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಅವರಿಗೆ, ಈಗ ಸಚಿವ ಸಂಪುಟದಲ್ಲಿ ಪ್ರಮುಖ ಜವಾಬ್ದಾರಿ ಲಭಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now