Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಕೈತಪ್ಪಿತ್ತು; ಕಾರಣ ಬಿಚ್ಚಿಟ್ಟ ಜಮೀರ್ ಅಹ್ಮದ್ ಖಾನ್

---Advertisement---

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಪಡೆದಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಕೈತಪ್ಪಲು ಆಡಿಯೋ ಬಿಡುಗಡೆ ವಿವಾದವೇ ಪ್ರಮುಖ ಕಾರಣವಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ತಾವು ಈ ಹಿಂದೆಯೇ ಹೇಳಿದ್ದೆ ಎಂದು ಅವರು ನೆನಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಅವಕಾಶ ಸಿಗದಿದ್ದರೂ ಯಾವುದೇ ಅಸಮಾಧಾನ ಹೊಂದಿರಲಿಲ್ಲ. ಎರಡನೇ ಪಟ್ಟಿಯಲ್ಲಿ ಅವಕಾಶ ಸಿಗುವ ನಿರೀಕ್ಷೆ ಇದ್ದರೂ, ಹೈಕಮಾಂಡ್ ಯಾವ ನಿರ್ಧಾರ ಕೈಗೊಂಡರೂ ಅದನ್ನು ಗೌರವಿಸುವ ಮನೋಭಾವದಲ್ಲೇ ಇದ್ದೆ ಎಂದರು.

“ಪಕ್ಷ 2028ರ ವಿಧಾನಸಭೆ ಚುನಾವಣೆಗೆ ಸಂಘಟನಾ ಕೆಲಸ ಮಾಡುವಂತೆ ಸೂಚಿಸಿದ್ದರೂ ಅದಕ್ಕೂ ಸಿದ್ಧನಿದ್ದೆ. ಆದರೆ ಇದೀಗ ಪಕ್ಷ ನನ್ನ ಮೇಲೆ ವಿಶ್ವಾಸ ಇಟ್ಟು ಸಚಿವ ಸ್ಥಾನ ನೀಡಿದೆ. ಈ ಜವಾಬ್ದಾರಿಯನ್ನು ಜನರ ನಿರೀಕ್ಷೆಗೆ ತಕ್ಕಂತೆ ಪ್ರಾಮಾಣಿಕವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸುತ್ತೇನೆ” ಎಂದು ಜಮೀರ್ ಹೇಳಿದರು.ತಮ್ಮ ವಿರುದ್ಧ ನಡೆದ ರಾಜಕೀಯ ಬೆಳವಣಿಗೆಗಳು ಮತ್ತು ವಿರೋಧಿಗಳ ಪ್ರಯತ್ನಗಳ ಕುರಿತು ಈಗ ಪ್ರತಿಕ್ರಿಯಿಸಲು ಇಚ್ಛಿಸುವುದಿಲ್ಲ. ಸದ್ಯ ಪಕ್ಷ ನೀಡಿರುವ ಜವಾಬ್ದಾರಿಯೇ ಮುಖ್ಯವಾಗಿದ್ದು, ಅದರ ಯಶಸ್ವಿ ನಿರ್ವಹಣೆಯತ್ತ ಸಂಪೂರ್ಣ ಗಮನ ಹರಿಸುವುದಾಗಿ ಅವರು ತಿಳಿಸಿದರು.

ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು, ಅಲ್ಪಸಂಖ್ಯಾತ ಸಮುದಾಯದಲ್ಲಿ ಪ್ರಭಾವಿ ಮುಖಂಡರೆಂದು ಗುರುತಿಸಿಕೊಂಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಮತ್ತೆ ಸಚಿವ ಸ್ಥಾನ ದೊರೆತಿರುವುದು ಕಾಂಗ್ರೆಸ್ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now