ಬೆಂಗಳೂರು.ಆಗಸ್ಟ್.3: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ ಆಗಸ್ಟ್ 02, 2026 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ (ಸಾಮಾನ್ಯ ಜ್ಞಾನ ಪತ್ರಿಕೆ) ತಾತ್ಕಾಲಿಕ ಕೀ ಉತ್ತರಗಳನ್ನು (Provisional Key Answers) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪ್ರಕಟಿತ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದೂರು/ಆಕ್ಷೇಪಣೆ ಸಲ್ಲಿಸಲು ಕೆಇಎ ಅವಕಾಶ ಕಲ್ಪಿಸಿದೆ.
ಆಕ್ಷೇಪಣೆ ಸಲ್ಲಿಕೆಗೆ ಮುಖ್ಯ ವಿವರಗಳು:
ಕೊನೆಯ ದಿನಾಂಕ ಮತ್ತು ಸಮಯ: ಆಗಸ್ಟ್ 06, 2026 ರ ಬೆಳಿಗ್ಗೆ 10:30 ಗಂಟೆಯೊಳಗೆ.
ಅಧಿಕೃತ ವೆಬ್‌ಸೈಟ್ ಪೋರ್ಟಲ್: cetonline.karnataka.gov.in/kea/
ಆಕ್ಷೇಪಣೆ ಶುಲ್ಕ: ಸಲ್ಲಿಕೆಯಾಗುವ ಪ್ರತಿ ಆಕ್ಷೇಪಣೆಗೆ ರೂ. 25/- ಪಾವತಿಸಬೇಕು (ಈ ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ).
ಆಕ್ಷೇಪಣೆ ಸಲ್ಲಿಸುವಾಗ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್ (Version Code), ಪ್ರಶ್ನೆ ಸಂಖ್ಯೆ ಹಾಗೂ ಬೆಂಬಲಿತ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯ.ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದಿರುವ, ಆಧಾರರಹಿತ ಹಾಗೂ ಅಪೂರ್ಣವಾಗಿರುವ ಅರ್ಜಿಗಳನ್ನು ಪುರಸ್ಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ನೇರವಾಗಿ ತಿರಸ್ಕರಿಸಲಾಗುವುದು.
ಆಗಸ್ಟ್ 2ರಂದು ನಡೆದ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಈ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 6ರಂದು ಬೆಳಿಗ್ಗೆ 10.30ರೊಳಗೆ ಸಲ್ಲಿಸಬೇಕು.
ವಿವರಗಳಿಗೆ ವೆಬ್ ಸೈಟ್ ನೋಡಿ.
-ಹೆಚ್.ಪ್ರಸನ್ನ ಐಎಎಸ್… pic.twitter.com/oGqLoMp0oT
ಇದನ್ನು ಓದಿಜವಾಬ್ದಾರಿ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ, ಅನಾವೃಷ್ಟಿ ಪರಿಶೀಲಿಸಿ : ನೂತನ ಸಚಿವರಿಗೆ ಸಿಎಂ ಸೂಚನೆ— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 3, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














