ಬೆಂಗಳೂರು: ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ನಿಂದ ದೊಡ್ಡ ಮಟ್ಟದ ಕಾನೂನು ನೆರವು ದೊರೆತ ಬೆನ್ನಲ್ಲೇ, ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಮಂಗಳವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಶಿಕ್ಷೆಯ ತೀರ್ಪಿನ ಆಧಾರದ ಮೇಲೆ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಲಾಗಿತ್ತು.
ಆದರೆ, ಸಿವಿಲ್ ನ್ಯಾಯಾಲಯ ನೀಡಿರುವ ಈ ಜೀವಾವಧಿ ಶಿಕ್ಷೆಯ ತೀರ್ಪಿಗೆ ಹೈಕೋರ್ಟ್ ಇತ್ತೀಚೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು. ಹೈಕೋರ್ಟ್ನ ಈ ನಿರ್ದೇಶನವನ್ನು ಆಧರಿಸಿ, ಸಚಿವಾಲಯವು ಅವರ ಶಾಸಕತ್ವವನ್ನು ಮರಳಿ ನೀಡಿ ಹೊಸ ಆದೇಶವನ್ನು ಹೊರಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










