ಚೆನ್ನೈ.ಆಗಸ್ಟ್.4: ಕಾವೇರಿ ನೀರು ಹಂಚಿಕೆ ಕುರಿತು ನಡೆದ ರೈತರ ಪ್ರತಿಭಟನೆ ವೇಳೆ ಪ್ರಸಿದ್ಧ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಪರೋಕ್ಷವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ (ಆಗಸ್ಟ್ 4) ಪೊಲೀಸರು ಬಂಧಿಸಿದ್ದಾರೆ.
ಚೆನ್ನೈನ ನೀಲಂಕರೈನಲ್ಲಿರುವ ಅವರ ನಿವಾಸದಿಂದ ಉದಯನಿಧಿ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ತಂಜಾವೂರಿಗೆ ಕರೆದೊಯ್ಯಲಿದ್ದಾರೆ.
ತಂಜಾವೂರು ತಮಿಳುಗ ವೆಟ್ರಿ ಕಳಗಂ (TVK) ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ತಂಜಾವೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಉದಯನಿಧಿ ವಿರುದ್ಧ ಮಹಿಳೆಯರ ಬಗ್ಗೆ ನಿಂದನೀಯ ಹಾಗೂ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ದೂರಿನ ಬೆನ್ನಲ್ಲೇ ಪೊಲೀಸರು ಬಂಧನ ಕ್ರಮ ಜರುಗಿಸಿದ್ದಾರೆ.

ಉದಯನಿಧಿ ಅವರ ಬಂಧನದ ಹಿನ್ನೆಲೆಯಲ್ಲಿ ಚೆನ್ನೈನ ನೀಲಂಕರೈನಲ್ಲಿರುವ ಅವರ ಮನೆ ಸುತ್ತಲೂ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ವೇಳೆ ಸ್ಥಳಕ್ಕೆ ಜಮಾಯಿಸಿದ ಡಿಎಂಕೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತೀವ್ರ ನೂಕಾಟ-ತಳ್ಳಾಟ ಹಾಗೂ ಮಾತಿನ ಚಕಮಕಿ ನಡೆದು ವಾತಾವರಣ ಉದ್ವಿಗ್ನಗೊಂಡಿತ್ತು.
#WATCH | Tamil Nadu | DMK leader and LoP Udhayanidhi Stalin detained by Police from his Chennai residence, following an FIR against him over his alleged defamatory remarks against CM Vijay pic.twitter.com/d1evXEG2By
— ANI (@ANI) August 4, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










