ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಆ. 05 : ಭಾರತೀಯ ಜನತಾ ಪಾರ್ಟಿ, ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಮದ್ಯಾಹ್ನ ಹರ್-ಘರ್ ತಿರಂಗ ಅಭಿಯಾನದ ಪೂರ್ವಭಾವಿ ಸಭೆಯನ್ನು ಜಿಲ್ಲಾಧ್ಯಕ್ಷರಾದ ಕೆ. ಟಿ. ಕುಮಾರಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ವಿಶೇಷ ಸಭೆಯಲ್ಲಿ ಇದೇ ತಿಂಗಳು ಆಗಸ್ಟ್ 11ನೇ 2026 ರಿಂದ ಆಗಸ್ಟ್ 15ನೇ 2026 ರವರೆಗೆ ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿಸ್ಕೃತವಾಗಿ ಚರ್ಚೆ ಮಾಡಲಾಯಿತು.

ಈ ಪೂರ್ವಭಾವಿ ಸಭೆಯಲ್ಲಿ ದಾವಣಗೆರೆ ವಿಭಾಗ ಸಹಾ ಪ್ರಭಾರಿಗಳಾದ ಎ ಮುರುಳಿ, ಜಿಲ್ಲಾ ಉಪಾಧ್ಯಕ್ಷ ರಾದ ಡಾ. ಸಿದ್ದಾರ್ಥ ಗುಂಡಾರ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಾಧುರಿ ಗಿರೀಶ್, ವೆಂಕಟೇಶ್ ಯಾದವ್, ಡಾ ಪಿ ಎಂ ಮಂಜುನಾಥ ಸೇರಿದಂತೆ ಹರ್ ಘರ್ ತಿರಂಗ ಅಭಿಯಾನದ ಸಂಚಾಲಕರು, ರಾಜ್ಯ, ಜಿಲ್ಲಾ ಮತ್ತು ಮಂಡಲ ಮಟ್ಟದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.










