Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸಿಎಂ ಡಾ.ಜಿ.ಪರಮೇಶ್ವರ್ 75ನೇ ಜನ್ಮದಿನ: ಚಿತ್ರದುರ್ಗದ ವಿದ್ಯಾರ್ಥಿನಿಯರಿಗೆ ಬುದ್ಧನ ಕಂಚಿನ ವಿಗ್ರಹ ವಿತರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 06 : ಅಹಿಂಸಾ ವಾದಿ ಬುದ್ದನ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾನತೆ ಎನ್ನುವುದು ತನ್ನಷ್ಟಕ್ಕೆ ತಾನೆ ಸಿಗುತ್ತದೆಂದು ಆಂಗ್ಲ ಭಾಷಾ  ಉಪನ್ಯಾಸಕ ಪ್ರೊ.ಡಿ.ಹೆಚ್.ನಟರಾಜ ತಿಳಿಸಿದರು.

 

ರಾಜ್ಯದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‍ರವರ 75 ನೇ ಜನ್ಮದಿನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ಬುದ್ದನ ಕಂಚಿನ ವಿಗ್ರಹಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಬುದ್ದನ ಸಂದೇಶ ಕುರಿತು ಉಪನ್ಯಾಸ ನೀಡಿದರು.

 

ಹುಟ್ಟುಹಬ್ಬವನ್ನು ಎಲ್ಲರೂ ವೈಭವೋಪೇತವಾಗಿ ಆಚರಿಸಿಕೊಳ್ಳುವ ಇಂದಿನ ಕಾಲಘಟ್ಟದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‍ರವರು ರಾಜ್ಯಾದ್ಯಂತ 75 ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಬುದ್ದನ ಹಿತ್ತಾಳೆ ವಿಗ್ರಹ ವಿತರಿಸುತ್ತಿರುವುದು ಹೆಮ್ಮೆಯ ಸಂಗತಿ. ಸಚಿವರಾದಾಗಿನಿಂದಲೂ ನಾಡಿನ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಎಲ್ಲೆಡೆ ಕ್ರೌರ್ಯ, ಮತ್ಸರ, ಅಸೂಯೆ, ದ್ವೇಷವನ್ನು ಕಾಣುತ್ತಿರುವ ಈ ಸಂದರ್ಭದಲ್ಲಿ ಬುದ್ದನ ತತ್ವ, ಸಿದ್ದಾಂತ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

 

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರು ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಒತ್ತು ಕೊಟ್ಟವರು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾತನೆಯನ್ನು ನೀಡಿದ್ದಾರೆ. ಬುದ್ದ ಹಾಗೂ ಅಂಬೇಡ್ಕರ್‍ರವರ ಆಶಯಗಳು ಪ್ರಸ್ತುತ ಸಮಾಜಕ್ಕೆ ಮುಖ್ಯ. ಚಿಕ್ಕಂದಿನಿಂದಲೂ ಶೋಷಣೆ, ಅಸ್ಪøಶ್ಯತೆ, ಅವಮಾನ ಅನುಭವಿಸಿದ ಅಂಬೇಡ್ಕರ್‍ರವರು ಹಿಂದೂ ಧರ್ಮದಲ್ಲಿ ಹುಟ್ಟಿ. ಹಿಂದೂ ಧರ್ಮದಲ್ಲಿಯೇ ಸಾಯಲಾರೆ ಎಂದು ಭೌದ್ದ ಧರ್ಮಕ್ಕೆ ಸೇರ್ಪಡೆಗೊಂಡರು ಎಂದರು.

 

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಮಾತನಾಡಿ ಅಹಿಂಸೆಯ ಸಂದೇಶವನ್ನು ಸಮಾಜಕ್ಕೆ ಸಾರಿರುವ ಬುದ್ದನ ಆದರ್ಶ, ತತ್ವ, ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ಅಶಾಂತಿ ಎನ್ನುವುದೇ ಇರುವುದಿಲ್ಲ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಆಶಯದಂತೆ ಶಿಕ್ಷಣವಂತರಾದಾಗ ನಿಜವಾಗಿಯೂ ಅಂಬೇಡ್ಕರ್‍ರವರ ಮೌಲ್ಯಗಳಿಗೆ ನಿಜವಾದ ಅರ್ಥ ಸಿಗುತ್ತದೆ ಎಂದು ನುಡಿದರು.

 

ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಮಾತನಾಡಿ ಹಾಸ್ಟೆಲ್ ವಿದ್ಯಾರ್ಥಿಗಳು ಬುದ್ದ ಹಾಗೂ ಅಂಬೇಡ್ಕರ್‍ರವರ ವಿಚಾರಗಳನ್ನು ತಿಳಿದುಕೊಳ್ಳಬೇಕು. ಗೌತಮ ಬುದ್ದನ ಅಹಿಂಸಾ ಮಾರ್ಗ ಇಂದಿನ ಸಮಾಜಕ್ಕೆ ಬೇಕಾಗಿದೆ. ಅದೇ ರೀತಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಸಂವಿಧಾನದ ಮೌಲ್ಯಗಳು ನಿಮ್ಮ ಜೀವನದಲ್ಲಿ ಅಳವಡಿಕೆಯಾಗಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ, ಬಿ.ಎಸ್.ಎನ್.ಎಲ್. ನಿವೃತ್ತ ವಿಭಾಗೀಯ ಇಂಜಿನಿಯರ್
ಬಿ.ಎ.ಪರಮೇಶ್ವರಪ್ಪ, ಬುದ್ದ ಯುವ ಪಡೆ ಅಧ್ಯಕ್ಷ ಡಿ.ಗೌತಮ್, ನಿವೃತ್ತ ಶಿಕ್ಷಕ ವೈ.ತಿಪ್ಪೇಸ್ವಾಮಿ, ವಕೀಲ ಸಂತೋಷ್, ವಿಶ್ವೇಶ್ವರಯ್ಯ, ನಿಂಗರಾಜು ಬಿವಿಕೆಎಸ್, ಕರಡಿ ಮಂಜುನಾಥ್, ಮಂಜುಳಮ್ಮ, ಕೆ.ದೇವರಾಜು, ಹೆಚ್.ಸಿ.ನಿರಂಜನಮೂರ್ತಿ, ಮೂರು ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿನಿಯರು, ಕಚೇರಿ ಸಿಬ್ಬಂದಿ, ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ನಿಲಯ ಪಾಲಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now