ಸುದ್ದಿಒನ್, ಚಿತ್ರದುರ್ಗ, ಆ. 06 : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಇದೇ ಆಗಸ್ಟ್ 8ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಹೊಳಲ್ಕೆರೆಯ ಒಂಟಿಕಂಬದ ಮುರುಘಾಮಠದಲ್ಲಿ ಲಿಂಗೈಕ್ಯ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ 32ನೇ ಸ್ಮರಣೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಅಧ್ಯಕ್ಷತೆ ವಹಿಸಲಿದ್ದು, ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು, ಡಾ|| ಪಿ.ಎಸ್. ಶಂಕರ್ ಮತ್ತು ಎಸ್.ಎನ್. ಚಂದ್ರಶೇಖರ್ ಅವರುಗಳು ಭಾಗವಹಿಸಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.











