Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಶಾಕ್ : ಸರಣಿಯಿಂದ ಸಾಯಿ ಸುದರ್ಶನ್ ಔಟ್!

---Advertisement---

ದೆಹಲಿ.ಆಗಸ್ಟ್.8: ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಗೂ ಮುನ್ನವೇ ಭಾರತ ಕ್ರಿಕೆಟ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಯುವ ಬ್ಯಾಟರ್ ಸಾಯಿ ಸುದರ್ಶನ್ ಗಾಯದ ಸಮಸ್ಯೆಯಿಂದಾಗಿ ಇಡೀ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.

ಸರಣಿ ಆರಂಭಕ್ಕೂ ಮುನ್ನವೇ ಪ್ರಮುಖ ಆಟಗಾರರೊಬ್ಬರು ಗಾಯಗೊಂಡು ಸರಣಿಯಿಂದ ವಂಚಿತರಾಗಿರುವುದು ಟೀಮ್ ಇಂಡಿಯಾಗೆ ಹಿನ್ನಡೆಯಾಗಿ ಪರಿಣಮಿಸಿದೆ.

ತಂಡವು ಶ್ರೀಲಂಕಾಗೆ ತೆರಳುವ ಮುನ್ನವೇ ಕಾಲ್ಬೆರಳಿನ (Toe Injury) ಗಾಯದಿಂದ ಬಳಲುತ್ತಿದ್ದ 24 ವರ್ಷದ ಸಾಯಿ ಸುದರ್ಶನ್, ಚೇತರಿಕೆಗಾಗಿ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಉಳಿದುಕೊಂಡಿದ್ದರು. ಮೊದಲ ಟೆಸ್ಟ್ ಪಂದ್ಯದ ವೇಳೆಗೆ ಚೇತರಿಸಿಕೊಂಡು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ.

 

 

Join WhatsApp

Join Now

Join Telegram

Join Now