Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಳೆಯರಿಗೆ ಸಿಹಿಸುದ್ದಿ : ಗೃಹಲಕ್ಷ್ಮಿ ಯೋಜನೆಯ 32ನೇ ಕಂತು ಬಿಡುಗಡೆ

---Advertisement---

ಬೆಂಗಳೂರು.ಆಗಸ್ಟ್8 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲುಪಲಿದೆ. ಇದರ ಬೆನ್ನಲ್ಲೇ ಗ್ಯಾರಂಟಿ ಯೋಜನೆಗಳ ದುರುಪಯೋಗ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ₹2,443 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡುಗಡೆ ಮಾಡಿದ್ದು, ಮೂರ್ನಾಲ್ಕು ದಿನಗಳಲ್ಲಿ ಕುಟುಂಬದ ಯಜಮಾನಿಯರ ಖಾತೆಗೆ ಡಿಬಿಟಿ ಮುಖಾಂತರ ತಲುಪಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಈ ಯೋಜನೆಗೆ ಅಗತ್ಯವಿರುವ 2443 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡುಗಡೆಗೊಳಿಸಿದ್ದಾರೆ. ಇದುವರೆಗೆ ಪ್ರತಿ ಯಜಮಾನಿಗೆ ₹62,000 ತಲುಪಿದ್ದು, ಈ ಕಂತಿನೊಂದಿಗೆ ಒಟ್ಟು ₹64,000 ನೀಡಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಅರ್ಹರಿಗೆ ಮಾತ್ರ ಯೋಜನೆಯ ಲಾಭ ಸಿಗಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.ನೋಂದಾಯಿತರಲ್ಲಿ ಮೃತಪಟ್ಟ 1,95,224 ಫಲಾನುಭವಿಗಳ ಖಾತೆಗಳಿಗೆ ಸುಮಾರು ₹115 ಕೋಟಿ ಹಣ ಸಂದಾಯವಾಗಿರುವುದು ಬೆಳಕಿಗೆ ಬಂದಿದೆ. ಇದನ್ನು ತಡೆಯಲು, ವ್ಯಕ್ತಿ ಮೃತಪಟ್ಟ 15 ದಿನಗಳ ಒಳಗಾಗಿ ಪಟ್ಟಿಯಿಂದ ಹೆಸರು ಕೈಬಿಡಲು ಹೊಸ ಮಾರ್ಗಸೂಚಿ ಬರಲಿದೆ.

Join WhatsApp

Join Now

Join Telegram

Join Now