Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಡದಿ ಟೌನ್ ಶಿಪ್ ವಿರೋಧಿಸಿ ಇಂದಿನಿಂದ 3 ದಿನ ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಪಾದಯಾತ್ರೆ

---Advertisement---

ರಾಮನಗರ.ಆಗಸ್ಟ್.9: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಜೆಡಿಎಸ್ ನೇತೃತ್ವದಲ್ಲಿ ಇಂದಿನಿಂದ ಮೂರು ದಿನಗಳ ಪಾದಯಾತ್ರೆ ನಡೆಯಲಿದೆ.

ಜೆಡಿಎಸ್ ಯುವ  ನಾಯಕ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಈ ಪ್ರತಿಭಟನಾ ಮೆರವಣಿಗೆ ಆಯೋಜನೆಯಾಗಿದೆ. ಇಂದು ಬೆಳಿಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಪಾದಯಾತ್ರೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ.

 

ಮೊದಲ ದಿನದ ಪಾದಯಾತ್ರೆಯು ಭೈರಮಂಗಲ ಗ್ರಾಮದಿಂದ ಶುರುವಾಗಿ, ಒಟ್ಟು 9 ಕಿಲೋಮೀಟರ್ ಕ್ರಮಿಸಲಿದೆ. ಈ ಹಾದಿಯು ತಿಮ್ಮೇಗೌಡನದೊಡ್ಡಿ, ವೃಷಭಾವತಿಪುರ ಹಾಗೂ ಅಬ್ಬನಕುಪ್ಪೆ ಮಾರ್ಗವಾಗಿ ಸಾಗಲಿದೆ. ಜೋಗರದೊಡ್ಡಿಯಲ್ಲಿ ಮಧ್ಯಾಹ್ನದ ಭೋಜನ ಹಾಗೂ ವಿಶ್ರಾಂತಿ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಮೇಡನಹಳ್ಳಿ, ಭೈರಮಂಗಲ ಕ್ರಾಸ್ ಮತ್ತು ಬಿಜಿಎಸ್ ವೃತ್ತದ ಮೂಲಕ ಸಾಗಿ ಬಿಡದಿಯಲ್ಲಿ ಇಂದಿನ ನಡಿಗೆ ಮುಕ್ತಾಯಗೊಳ್ಳಲಿದೆ. ಪಾದಯಾತ್ರೆಯಲ್ಲಿ ಪಾಲ್ಗೊಂಡ ಹೋರಾಟಗಾರರು ರಾತ್ರಿ ಬಿಡದಿಯ ಮಂಜುನಾಥ ಕಲ್ಯಾಣ ಮಂಟಪದಲ್ಲಿ ತಂಗಲಿದ್ದಾರೆ.

ಈ ಬೃಹತ್ ಪ್ರತಿಭಟನೆಯಲ್ಲಿ ಜೆಡಿಎಸ್‌ನ ಹಾಲಿ ಹಾಗೂ ಮಾಜಿ ಶಾಸಕರು, ಎಂಎಲ್‌ಸಿಗಳು ಮತ್ತು ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಬಿಜೆಪಿ ನಾಯಕರಾದ ಆರ್‌. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ಕೂಡ ಜೆಡಿಎಸ್ ನಾಯಕರೊಂದಿಗೆ ಹೆಜ್ಜೆ ಹಾಕಿ ಬೆಂಬಲ ಸೂಚಿಸಲಿದ್ದಾರೆ.

 

Join WhatsApp

Join Now

Join Telegram

Join Now