ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ. ಎಂ.
ಭೀಮಸಮುದ್ರ, ಚಿತ್ರದುರ್ಗ (ತಾ)
ಮೊ : 8088076203
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 10 : ಸರ್ಕಾರಿ ಶಾಲೆಗಳು ನಮ್ಮ ಪುರಾತನ ಕಾಲದಿಂದಲೂ ಇವೆ. ಇತ್ತೀಚಿಗೆ ಖಾಸಗಿ ಶಾಲೆಗಳ ಪ್ರಾರಂಭವಾದಾಗಿನಿಂದ ಸರ್ಕಾರಿ ಶಾಲೆಗೆ ಪೋಷಕರು ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ನಾವೆಲ್ಲ ಸರ್ಕಾರಿ ಶಾಲೆಯಲ್ಲಿ ಓದಿ ಕೃಷಿ ಮತ್ತು ಉದ್ಯಮವನ್ನು ಕಟ್ಟಿಕೊಂಡಿದ್ದೇವೆ. ಆದ್ದರಿಂದ ಪೋಷಕರು ಖಾಸಗಿ ಶಾಲೆಯ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು ಎಂದು ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಎಸ್. ಮಂಜುನಾಥ್ ಹೇಳಿದರು.
ಅವರು ತಾಲ್ಲೂಕಿನ ಭೀಮಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಮಿಸಿ, ಆಗಸ್ಟ್ 15ರ ಸ್ವಾತಂತ್ರ್ಯ ದಿನೋತ್ಸವದ ಪ್ರಯುಕ್ತ ಮಕ್ಕಳಿಗೆ ಉಚಿತವಾಗಿ ಡಬ್ ಸಟ್ ವಿತರಣೆ ಮಾಡಿ ಮಾತನಾಡಿದರು.


ಈ ಶಾಲೆಯಲ್ಲಿ ಇತ್ತೀಚಿಗೆ ವಾಮಾಚಾರ ಮಾಡಿರುವ ಸಂಗತಿ ತಿಳಿದು ಬಂದಿದೆ. ಆದುದರಿಂದ ನಾನು ನನ್ನ ಸ್ವಂತ ಖರ್ಚಿನಲ್ಲಿ ಸಿಸಿಟಿವಿ ಹಾಕಿಸಿಕೊಡುತ್ತೇನೆ. ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಶಾಲೆಯ ಬಗ್ಗೆ ಗಮನ ಹರಿಸಬೇಕು ಎಂದರು.ವೇದಾಂತ ಕಂಪನಿಯಿಂದ ಕಾಂಪೌಂಡ್ ನಿರ್ಮಾಣ ಮಾಡಿದ್ದು ಅದರ ಇನ್ನುಳಿದ ಕಾಮಗಾರಿ ಸ್ಥಗಿತಗೊಂಡಿದೆ. ಆದಷ್ಟು ಬೇಗ ಮೈನಿಂಗ್ ಕಂಪನಿಯ ಸಿಬ್ಬಂದಿ ವರ್ಗ ಕಾಂಪೌಂಡ್ ನಿರ್ಮಾಣ ಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಮಕ್ಕಳು, ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.








